ಜಗಳೂರು: ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ವಿಳಂಬದಿಂದಾಗಿ ನೂರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಿರುವ ಬಗ್ಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಂಚಾಯಿತಿ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘ಕಾಮಗಾರಿ ವಿಳಂಬಕ್ಕೆ ಹಲವು ಕಾರಣಗಳಿದ್ದು, ಗ್ರಾಮಸ್ಥರ ಕ್ಷಮೆ ಕೋರುತ್ತೇವೆ’ ಎಂದು ಅಧಿಕಾರಿಗಳು ತಿಳಿಸಿದರು.

ಕಾರ್ಯನಿರ್ವಾಹಕ ಎಂಜಿನಿಯರ್ ಟಾಟಾ ಶಿವನ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜ್ ಹಾಗೂ ಗುತ್ತಿಗೆದಾರರು ಭೇಟಿ ನೀಡಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಪರ್ಯಾಯ ಕಟ್ಟಡಕ್ಕೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಇನ್ನು ಒಂದು ತಿಂಗಳೊಳಗೆ ಕಾಮಗಾರಿಯನ್ನು ಮುಗಿಸಿ, ಮಕ್ಕಳಿಗೆ ಕೊಠಡಿಗಳನ್ನು ಕೊಡುವುದಾಗಿ ಭರವಸೆ ನೀಡಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಈರಮ್ಮ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಬಿ.ಟಿ.ವೆಂಕಟೇಶ್, ಹನುಮಂತಪ್ಪ ಎಚ್., ಎಸ್‌ಡಿಎಂಸಿ ಅಧ್ಯಕ್ಷ ರುದ್ರೇಶ್, ಮುಖ್ಯ ಶಿಕ್ಷಕ ಈರಾಳಪ್ಪ, ಮುಖಂಡರಾದ ಯು.ವೈ.ರಾಜಪ್ಪ, ಸುರೇಶ್, ರವಿ ಯು.ಸಿ., ಕಾಂತರಾಜ್, ಶಾಂತಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.