ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ ವಿವಿಯಲ್ಲಿ ಸಂಭ್ರಮದ ಕನ್ನಡ ಹಬ್ಬ

Published : 2 ಡಿಸೆಂಬರ್ 2019, 10:23 IST
ಫಾಲೋ ಮಾಡಿ
Comments

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿ.ವಿ ಆವರಣದ ತುಂಬ ಹಳದಿ-ಕೆಂಪು ಬಣ್ಣದ ಬಾವುಟಗಳ ಹಾರಾಟ, ತಳಿರು ತೋರಣಗಳ ವಿಶೇಷ ಅಲಂಕಾರ ಕನ್ನಡದ ಹಬ್ಬದ ವಾತಾವರಣ ಸೃಷ್ಟಿಸಿತ್ತು. ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು ಶುರುವಾಗುತ್ತಿದ್ದಂತೆ ವಿದ್ಯಾರ್ಥಿಗಳ ಕುಣಿತವೂ ಆರಂಭವಾಯಿತು.

ಕನ್ನಡ ಅಧ್ಯಯನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಸವರಾಜ ಬಣಕಾರ ನಾಡದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು.

ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್., ಹಣಕಾಸು ಅಧಿಕಾರಿ ಪ್ರೊ. ಗೋಪಾಲ ಎಂ. ಅಡವಿರಾವ್, ವಿವಿಧ ವಿಭಾಗಗಳ ಪ್ರಾಧ್ಯಾಪಕರಾದ ಪ್ರೊ. ಮಹಾಬಲೇಶ್ವರ, ಪ್ರೊ. ಶಿವಕುಮಾರ ಕಣಸೋಗಿ, ಡಾ. ಅಶೋಕಕುಮಾರ ಪಾಳೇದ, ರಾಜಕುಮಾರ, ಅಧೀಕ್ಷಕ ದೇವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT