ದಾವಣಗೆರೆ: ‘ವಿದೇಶಕ್ಕೆ ಹೋಗಿ ಭಾರತದ ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸುವಂತೆ ಬೇಡುವ ಮೂಲಕ ದೇಶದ ಮಾನ ಹರಾಜು ಹಾಕಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದಲ್ಲಿ ಮೇ 25ರಂದು ನಡೆಯಲಿರುವ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ಯ ಮಹಾಸಂಗಮ ಸಮಾವೇಶದ ಸಿದ್ಧತೆಯನ್ನು ಶನಿವಾರ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಅಮೆರಿಕ, ಯುರೋಪ್ ದೇಶಗಳಿಗೆ ಹೋಗಿ ಭಾರತದ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಕೋರಿದ ರಾಹುಲ್ ಗಾಂಧಿಯವರನ್ನು ದೇಶದ ಜನ ಎಂದಿಗೂ ಕ್ಷಮಿಸುವುದಿಲ್ಲ. ಭಾರತ್ ಜೋಡೊ ಯಾತ್ರೆ ಮಾಡಿದ್ದ ರಾಹುಲ್ ಗಾಂಧಿ ಇದೀಗ ವಿದೇಶಗಳಿಗೆ ಹೋಗಿ ಭಾರತದ ಮಾನ ಕಳೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಲಸಗಳಿಂದಲೇ ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಕುಸಿಯುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇವನ್ನೂ ಓದಿ...

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲವೆಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಿವೃತ್ತಿ: ಶಾಸಕ ಶ್ರೀನಿವಾಸಗೌಡ

ವಿಧಾನಸಭೆ ಚುನಾವಣೆ | ಸಿದ್ದರಾಮಯ್ಯಗೆ ಅಲೆದಾಟ ತಪ್ಪಿದ್ದಲ್ಲ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.