ಹೊನ್ನಾಳಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬುಧವಾರ ಪಟ್ಟಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಘಟಕದ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಹಾಗೂ ಸಂಘದ ಪರಿವಾರದವರು ಚರ್ಚಿಸಿ ನೇಮಕ ಮಾಡಿದ್ದಾರೆ. ಈಗ ಕೆಲ ಹಿರಿಯ ನಾಯಕರು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ’ ಎಂದು ಪರೋಕ್ಷವಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ಟಾಂಗ್ ಕೊಟ್ಟರು.

ವಿಜಯೇಂದ್ರ ನೇತೃತ್ವದಲ್ಲಿ ಮೂಡಾ ಹಗರಣದ ವಿರುದ್ಧ ನಡೆಸಿದ ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.
.BJP ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರನ್ನು ನಾವು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.