ದಾವಣಗೆರೆ: ಗಾಂಜಾ ಗಿಡಗಳನ್ನು ಬೆಳೆದಿದ್ದ ಅಪರಾಧಿಗೆ ಎರಡು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
.ಮಂಗಳೂರು | ಕಾರಾಗೃಹದ ಮೇಲೆ ದಾಳಿ: ಮೊಬೈಲ್, ಡ್ರಗ್ಸ್, ಗಾಂಜಾ ವಶಕ್ಕೆ .
ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿಯ ಮಹೇಶ್ (42) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗ್ಡೆ ಆದೇಶ ನೀಡಿದ್ದಾರೆ.
.ಹುಬ್ಬಳ್ಳಿ: ಗಾಂಜಾ ಮಾರಾಟ; 12 ಆರೋಪಿಗಳ ಬಂಧನ.
ಗ್ರಾಮದ ಚೌಡೇಶ್ವರಿ ದೇಗುಲದ ಸಮೀಪದ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದ ಖಚಿತ ಮಾಹಿತಿಯ ಮೇರೆಗೆ ಸಂತೆಬೆನ್ನೂರು ಠಾಣೆಯ ಎಸ್ಐ ಶಿವರುದ್ರಪ್ಪ ಎಸ್.ಮೇಟಿ ನೇತೃತ್ವದ ಪೊಲೀಸರ ತಂಡ 2020ರ ಸೆ.14ರಂದು ದಾಳಿ ನಡೆಸಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಬಿ.ಮಂಜುನಾಥ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
.ಗಾಂಜಾ ಮಾರಾಟ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.