ಮಾಯಕೊಂಡ: ಮಾಯಕೊಂಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಸಮೀಪದ ರಾಮಗೊಂಡನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸದಸ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಚಿವು, ಮಾಯಕೊಂಡದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಅಗತ್ಯವಿದ್ದು, ಶೀಘ್ರವೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಐದು ಸಾವಿರ ಆರೋಗ್ಯ ಕೇಂದ್ರಗಳಿಗೆ ಸೋಲಾರ್ ಅಳವಡಿಸುವ ಕೆಲಸ ಆಗುತ್ತಿದ್ದು, ರಾಮಗೊಂಡನಹಳ್ಳಿ ಆಸ್ಪತ್ರೆಗೂ ಈ ಸೌಲಭ್ಯ ನೀಡುವಂತೆ ಸೂಚಿಸಲಾಗುವುದು ಎಂದರು.

ಕೇಂದ್ರಸ್ಥಾನ ಮಾಯಕೊಂಡ ಸೇರಿದಂತೆ ಅಗತ್ಯವಿರುವ ಕಡೆ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಿದರೆ ಜನರಿಗೆ ಅನುಕೂಲ ಆಗುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.

ಆಶಾ ಕಾರ್ಯಕರ್ತೆಯರ ವೇತನ ಹಾಗೂ ವಿವಿಧ ಬೇಡಿಕೆಗಳ ಈಡೇರಿಸಲು ಬದ್ಧವಾಗಿದ್ದೇನೆ ಎಂದು ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ರಾಮಗೊಂಡನಹಳ್ಳಿ ಶರಣಪ್ಪ ಸ್ವಾಗತಿಸಿದರು. ಆಸ್ಪತ್ರೆ ಸ್ಥಳ ದಾನಿಗಳಾದ ಕೋಲ್ಕುಂಟೆ ಮಂಜಣ್ಣ ಅವರನ್ನ ಗೌರವಿಸಲಾಯಿತು. ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಆರೋಗ್ಯ ಇಲಾಖೆ ಅಭಿಯಾನ ನಿರ್ದೇಶಕ ನವೀನ್ ಭಟ್, ಡಿಎಚ್ಒ ಷಣ್ಮುಖಪ್ಪ ಎಸ್., ವೈದ್ಯಾಧಿಕಾರಿ ಡಾ. ಮಂಜನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟಗೆ, ಗುತ್ತಿಗೆದಾರ ಎನ್.ಎಂ. ಸಂತೋಷ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಒ. ಮಹೇಶ್, ಆರೋಗ್ಯ ಇಲಾಖೆ ಸಿಬ್ಬಂದಿ, ರಾಮಗೊಂಡನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.