ಹೊನ್ನಾಳಿ: ‘ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಂದಿಗೆ ಶಾಮೀಲಾಗಬೇಡಿ, ಬೇಕಾದರೆ ಅವರು ಕೊಡುವ ಕಮಿಷನ್ ನಾನೇ ಕೊಡುತ್ತೇನೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗದಂತೆ ನೋಡಿಕೊಳ್ಳಿ’

ಇದು ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನೀಡಿರುವ ಅಭಯ.

ಹೊನ್ನಾಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಎಇಇ ಕಣುಮಪ್ಪ ಸೇರಿ ಇತರ ಅಧಿಕಾರಿಗಳಿಗೆ ಈ ರೀತಿ ಸಿಟ್ಟಿನಿಂದಲೇ ಭರವಸೆ ನೀಡಿದರು.

‘ಹೊನ್ನಾಳಿ–ಶಿವಮೊಗ್ಗ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕಳಪೆಯಾಗಿದೆ’ ಎಂಬ ದೂರುಗಳು ಬಂದಿರುವ ಕಾರಣ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ‘ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಎಂದು ಜನರು ದೂರುತ್ತಿದ್ದಾರೆ. ಡಾಂಬರೀಕರಣ ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಿ’ ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.