ದಾವಣಗೆರೆ: ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರುವವರು ಹಾಗೂ ಪಾಕಿಸ್ತಾನದ ಪರ ಘೋಷಣೆ ಕೂಗುವವರಿಗೆ ಗುಂಡು ಹೊಡೆಯಬೇಕು. ಆಗ ಗಲಾಟೆಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಭಿಪ್ರಾಯಪಟ್ಟರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅರಾಜಕತೆ ಸೃಷ್ಟಿಯಾಗಿದೆ. ಅಧಿಕಾರದಲ್ಲಿ ಮುಂದುವರಿಯುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಅಶಾಂತಿ ನೆಲೆಸಿದೆ’ ಎಂದು ಜಿಲ್ಲಾ ಕಾರಾಗೃಹದ ಬಳಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ದಾವಣಗೆರೆಯಲ್ಲಿ ಅಮಾಯಕ ಹಿಂದೂಗಳನ್ನು ಬಂಧಿಸಲಾಗಿದೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಹಿಂದೂಗಳ ಮನೆಗೆ ನುಗ್ಗಿ ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರ ವಿರುದ್ಧ ಇಷ್ಟೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.

ಹಿಂದೂಗಳ ಮೇಲೆ ಹಲ್ಲೆ ನಡೆದರೆ ನಾವು ಸುಮ್ಮನಿರುವುದಿಲ್ಲ. ಗಲಭೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ ಹಾಗೂ ಸಂಸದರು ಭೇಟಿ ನೀಡಿಲ್ಲ.
ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.