ದಾವಣಗೆರೆ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಕೇಂದ್ರ ತೆರೆಯುವಂತೆ ರೈತರು ಮನವಿ ಮಾಡಿದ್ದು, ಬೆಳೆಯ ವಿಸ್ತೀರ್ಣ ಹಾಗೂ ಉತ್ಪಾದನೆಯ ಪ್ರಮಾಣವನ್ನು ಆಧರಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಜಿಲ್ಲಾಡಳಿತ ಆಲೋಚಿಸುತ್ತಿದೆ.

ಸೂರ್ಯಕಾಂತಿ ಹಾಗೂ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಈ ಬೆಳೆಗಳ ಖರೀದಿಗೆ ಕೇಂದ್ರಗಳನ್ನು ತೆರೆದರೆ ಅನುಕೂಲವಾಗುತ್ತದೆ ಎಂಬುದು ರೈತರ ಕೋರಿಕೆ.

ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ ಹೊಂದಿದ 2.46 ಲಕ್ಷ ಹೆಕ್ಟೇರ್ ಪ್ರದೇಶದ ಪೈಕಿ 2.42 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಮೆಕ್ಕೆಜೋಳ, ಭತ್ತ ಹೆಚ್ಚು ಪ್ರದೇಶದಲ್ಲಿದ್ದು, ಮಳೆಯಾಶ್ರಿತ ಪ್ರದೇಶದಲ್ಲಿ ಹೆಸರು ಬೆಳೆ ಕೂಡ ಅತ್ಯಲ್ಪ ಪ್ರಮಾಣದಲ್ಲಿದೆ. ಸೆಪ್ಟೆಂಬರ್ ಬಳಿಕ ಸೂರ್ಯಕಾಂತಿ ಬಿತ್ತನೆ ನಡೆಯಲಿದೆ. ಹಿಂಗಾರು ಹಂಗಾಮಿನಲ್ಲಿ ಮತ್ತೆ ಹೆಸರು ಬಿತ್ತನೆಯಾಗುತ್ತದೆ. ಖರೀದಿ ಕೇಂದ್ರ ತೆರೆದರೆ ಉತ್ತಮ ಬೆಲೆ ಸಿಗುತ್ತದೆ ಎಂಬುದು ರೈತರ ನಿರೀಕ್ಷೆ.

ಹೆಸರುಕಾಳು ಹಾಗೂ ಸೂರ್ಯಕಾಂತಿಗೆ ಬೆಲೆ ನಿಶ್ಚಿತವಾಗಿ ಸಿಗುತ್ತಿಲ್ಲ. ಪ್ರತಿ ಕ್ವಿಂಟಲ್ ಹೆಸರುಕಾಳಿಗೆ ಮಾರುಕಟ್ಟೆಯಲ್ಲಿ ₹ 4,500ದಿಂದ ₹ 7,000ವರೆಗೆ ಬೆಲೆ ಇದೆ. ಸರ್ಕಾರ ಪ್ರತಿ ಕ್ವಿಂಟಲ್‌ಗೆ ₹ 8,682 ದರ ನಿಗದಿ ಮಾಡಿದೆ. ಜನವರಿ ಬಳಿಕ ಮಾರುಕಟ್ಟೆಗೆ ಬರುವ ಸೂರ್ಯಕಾಂತಿಗೂ ರೈತರಿಗೆ ಉತ್ತಮ ಬೆಲೆ ಸಿಗುವ ಭರವಸೆ ಇಲ್ಲ. ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಲ್ ಸೂರ್ಯಕಾಂತಿಗೆ ₹ 7,280 ನಿಗದಿಪಡಿಸಿದೆ. ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿಸಿದರೆ ಮಾರುಕಟ್ಟೆಗಿಂತ ಹೆಚ್ಚಿನ ದರ ಸಿಗುತ್ತದೆ ಎಂಬುದು ರೈತರ ಲೆಕ್ಕಾಚಾರ.

‘ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತಿದೆ. ಖರೀದಿ ಕೇಂದ್ರ ತೆರೆದರೆ ಅನುಕೂಲ ಎಂಬುದಾಗಿ ಹೊನ್ನಾಳಿ ತಾಲ್ಲೂಕಿನ ಕೆಲ ರೈತರು ಕೋರಿಕೊಂಡಿದ್ದಾರೆ. ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಇದೆ, ಆವಕ ಹೇಗಿದೆ ಎಂಬ ಮಾಹಿತಿ ಆಧರಿಸಿ ಇದು ನಿರ್ಧಾರವಾಗುತ್ತದೆ. ಇಲ್ಲವಾದರೆ ಪಕ್ಕದ ಜಿಲ್ಲೆಯ ಖರೀದಿ ಕೇಂದ್ರಗಳಲ್ಲಿ ಅನುಮತಿ ಪಡೆಯಲು ಅವಕಾಶವಿದೆ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪ್ರತಿಕ್ರಿಯಿಸಿದರು.

ಹೆಸರು ಸೂರ್ಯಕಾಂತಿ ಖರೀದಿ ಕೇಂದ್ರ ತೆರೆಯುವಂತೆ ರೈತರಿಂದ ಕೋರಿಕೆ ಬಂದಿದೆ. ಬಿತ್ತನೆ ಬೆಳೆಯ ವಿಸ್ತೀರ್ಣದ ಮಾಹಿತಿ ಪಡೆದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು
ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ ದಾವಣಗೆರೆ

ಹೆಸರು ಬೆಳೆಯುವುದು ಕಡಿಮೆಯಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ ಮಾತ್ರ ಸೂರ್ಯಕಾಂತಿ ಬೆಳೆಯುತ್ತಾರೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಖರೀದಿ ಕೇಂದ್ರ ತೆರೆದರೆ ಅನುಕೂಲ
ದೊಡ್ಡೇರಿ ಬಸವರಾಜಪ್ಪ ರೈತ ಮುಖಂಡರು ಹೊನ್ನಾಳಿ

ಸೂರ್ಯಕಾಂತಿ ಹೆಚ್ಚು ಬಿತ್ತನೆ

ಹೆಸರು ಹಾಗೂ ಸೂರ್ಯಕಾಂತಿಯನ್ನು ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಹೆಸರು ಬೆಳೆಗಿಂತ ಸೂರ್ಯಕಾಂತಿ ವಿಸ್ತೀರ್ಣ ಹೆಚ್ಚು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದರು. ‘ಮಳೆಯಾಶ್ರಿತ ಪ್ರದೇಶದಲ್ಲಿ ಹಿಂಗಾರು ಹಂಗಾಮಿನಲ್ಲಿ ಹೆಸರು ಬೆಳೆಯಲಾಗುತ್ತದೆ. ಮುಂಗಾರು ಹಂಗಾಮು ಪೂರ್ಣಗೊಳ್ಳುವ ಹಂತದಲ್ಲಿ ಸೂರ್ಯಕಾಂತಿ ಬಿತ್ತನೆ ನಡೆಯುತ್ತದೆ. ಜಿಲ್ಲೆಯಲ್ಲಿ ಅಂದಾಜು 2500 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತದೆ’ ಎಂದರು. ‘ದಶಕದ ಹಿಂದೆ ಹೆಸರು ಹೆಚ್ಚಾಗಿ ಬೆಳೆಯಲಾಗುತ್ತಿತ್ತು. ಮೆಕ್ಕೆಜೋಳದ ವಿಸ್ತೀರ್ಣ ಏರಿಕೆಯಾದಂತೆ ದ್ವಿದಳ ಧಾನ್ಯಗಳ ಬೆಳೆಯ ವಿಸ್ತೀರ್ಣ ಕಡಿಮೆಯಾಗಿದೆ. ಹೆಸರು ಬೆಳೆಯುವ ಪ್ರದೇಶ ಕುಂಠಿತವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.