ಚನ್ನಗಿರಿ ತಾಲ್ಲೂಕು ಜೋಳದಹಾಳ್ ಗ್ರಾಮದ ಕೆರೆ
ಮಾಯಕೊಂಡ ಸಮೀಪದ ದೊಡ್ಡಮಾಗಡಿ ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ನಡೆದ ಕೆರೆ ಅಭಿವೃದ್ಧಿ ಕಾಮಗಾರಿ
ದಾವಣಗೆರೆಯ ಜಿಲ್ಲಾ ಪಂಚಾಯತಿ ಸಿಇಒ ಸುರೇಶ್ ಇಟ್ನಾಳ್
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಲಕ್ಷ್ಮೀ ರಂಗನಾಥ ದೇವಾಲಯದ ಕೆರೆ
ಜಗಳೂರು ತಾಲ್ಲೂಕಿನ ಸಂಗೇನಹಳ್ಳಿ ಕೆರೆ ತೂಬಿನ ಬಳಿ ಬೃಹದಾಕಾರವಾಗಿ ಬೆಳೆದುನಿಂತಿರುವ ಮುಳ್ಳುಕಂಟಿ
ಕಳೆದ ವರ್ಷ ‘ಅಮೃತ ಸರೋವರ’ ಯೋಜನೆಯಡಿ 150 ಕೆರೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿತ್ತು. ಇದರಲ್ಲಿ 126 ಕೆರೆಗಳು ಅಭಿವೃದ್ಧಿಗೊಂಡಿವೆ. ಇನ್ನು 24 ಕೆರೆಗಳ ಕಾಮಗಾರಿ ಪ್ರಗತಿಯಲ್ಲಿದೆ.
ಸುರೇಶ್ ಇಟ್ನಾಳ್ ಜಿಲ್ಲಾ ಪಂಚಾಯಿತಿ ಸಿಇಒಕೆರೆಗಳಲ್ಲಿ ನೀರು ಸೋರಿಕೆ ಆಗದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ತೂಬು ಕೀಳಲು ಅವಕಾಶ ನೀಡದಂತೆ ನಿಗಾ ವಹಿಸಲಾಗುತ್ತಿದೆ. ಅನ್ಯ ಉದ್ದೇಶಗಳಿಗೆ ಬಳಸದೆ ಕೆರೆಯಲ್ಲಿ ನೀರು ಸಂಗ್ರಹಿಸಿ ಅಂತರ್ಜಲ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.
ಪ್ರವೀಣ್ ಬಿ.ಕೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಣ್ಣ ನೀರಾವರಿ ಇಲಾಖೆ ದಾವಣಗೆರೆಅಂತರ್ಜಲ ಮಟ್ಟ ವೃದ್ಧಿಸುವ ನೀರು ಸಂರಕ್ಷಿಸುವ ಭಾಗವಾಗಿ ಸಂಸ್ಥೆಯಿಂದ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮ ರೂಪಿಸಿದ್ದೇವೆ. ರೈತರಿಗೂ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೆರೆ ಪುನಶ್ಚೇತನದ ಮೂಲಕ ಬರಗಾಲದಂತಹ ಸಂದರ್ಭವನ್ನು ಸಮರ್ಥವಾಗಿ ಎದುರಿಸಬಹುದು.
ಲಕ್ಷ್ಮಣ ಎಂ ಜಿಲ್ಲಾ ನಿರ್ದೇಶಕ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆತಾಲ್ಲೂಕಿನ ಬಹುತೇಕ ಕೆರೆಗಳಲ್ಲಿ ಮುಳ್ಳಿನ ಕಂಟಿಗಳು ಬೆಳೆದಿವೆ. ಅನುದಾನ ಬಿಡುಗಡೆಯಾದ ಕೂಡಲೇ ಎಲ್ಲ ಕೆರೆ ಏರಿಗಳ ಮುಳ್ಳುಕಂಟಿಗಳನ್ನು ತೆರವುಗೊಳಿಸಲಾಗುವುದು.
ರಾಘವೇಂದ್ರ ಸಹಾಯಕ ಎಂಜಿನಿಯರ್ ಸಣ್ಣ ನೀರಾವರಿ ಇಲಾಖೆ ಜಗಳೂರು