ದಾವಣಗೆರೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ಇದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

‘ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ನಾಯಕರು ರಾಜ್ಯವನ್ನು ಕೊಳ್ಳೆಹೊಡೆದು ಹಣ, ಆಸ್ತಿ ಮಾಡಿಕೊಂಡಿದ್ದಾರೆ. ಗಂಟಲವರೆಗೂ ತಿಂದು ಜೀರ್ಣಿಸಿಕೊಳ್ಳಲು ಒದ್ದಾಡುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಕೆಡವಲು ಇಂಥವರಿಂದ ಸಾಧ್ಯವಿಲ್ಲ. ಬಿಜೆಪಿ ನಾಯಕರ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರಲಿವೆ’ ಎಂದು ಸೋಮವಾರ ಪ್ರತಿಭಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಿದ್ದರಾಮಯ್ಯ ಶುದ್ಧಹಸ್ತರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಅವರಿಂದ ಕರ್ನಾಟಕಕ್ಕೆ ಒಳಿತಾಗಿದೆ. ರಾಜ್ಯಪಾಲರು ಸ್ವನಿರ್ಧಾರ ಕೈಗೊಳ್ಳದೇ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಬಿಜೆಪಿ ನಾಯಕರು ಮಾಡಿದ ದೊಡ್ಡ ಹಗರಣಗಳನ್ನು ಬಿಟ್ಟು ‘ಮುಡಾ’ ಪ್ರಕರಣ ಹಿಡಿದುಕೊಂಡು ವಿವಾದ ಸೃಷ್ಟಿಸಿದ್ದಾರೆ’ ಎಂದು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.