ದಾವಣಗೆರೆ: ಕಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಜನವರಿ 1ರಿಂದ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ.

ಕಾಯಂಗೆ ಒತ್ತಾಯಿಸಿ ನವೆಂಬರ್ 23ರಿಂದ ವಿವಿಧ ಮಾದರಿಯಲ್ಲಿ ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘ- ದಾವಣಗೆರೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು 34ನೇ ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಎಲ್ಲಾ ಅತಿಥಿ ಉಪನ್ಯಾಸಕರು ತುಮಕೂರು ಸಿದ್ಧಗಂಗಾ ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದು ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಜಿಲ್ಲೆಯಿಂದ 150ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪಾದಯಾತ್ರೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ. ಅಲ್ಲಿಯವರೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮುಂದುವರಿಯಲಿದೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಂದು ಶ್ಯಾಮ್ ಪ್ರಸಾದ್ ತಿಳಿಸಿದರು.

ಪ್ರತಿಭಟನೆಯಲ್ಲಿ ಸಿದ್ದೇಶ್, ಕಳಕಪ್ಪ ಚೌರಿ, ಮೋಹನ್, ಜಗದೀಶ್, ಚೌಡೇಶ್, ಪ್ರವೀಣ್ ಕುಮಾರ್, ಸಂತೋಷ್ ಕುಮಾರ್, ಸಂದೀಪ್, ರವೀಂದ್ರ, ರಾಘವೇಂದ್ರ, ಶುಭ, ಸ್ಮಿತಾ, ಚಂದ್ರಿಕಾ, ಲಕ್ಷ್ಮೀ, ಭಾರತಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.