ಹೊನ್ನಾಳಿ: ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳನ್ನು ಈಡೇರಿಸಲು ವಿಫಲವಾಗಿದ್ದು, ಪ್ರತಿ ಹಂತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಅವರು ಮಾತನಾಡಿದರು.

‘ಕೊಟ್ಟ ಭರವಸೆಗಳನ್ನು ಈಡೇರಿಸಲು ಎಲ್ಲಿಂದ ಹಣ ತರಬೇಕು. ಚುನಾವಣೆಯಲ್ಲಿ ಹೇಳುತ್ತೇವೆ ಅಷ್ಟೇ, ದುಡ್ಡು ಪ್ರಿಂಟ್ ಮಾಡೋಕಾಗುತ್ತಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಎಂದು ಬಿಂಬಿಸಲಾದ ವಿಡಿಯೊ ಕ್ಲಿಪ್ ಅನ್ನು ರೇಣುಕಾಚಾರ್ಯ ಪ್ರದರ್ಶಿಸಿದರು.

‘ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಘೋಷಣೆ ಮಾಡಲಾಗಿದೆ. ಆದರೆ, ಇದುವರೆಗೂ ಸರ್ಕಾರದಿಂದ ಬಿಡಿಗಾಸೂ ಪರಿಹಾರ ಬಿಡುಗಡೆ ಮಾಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುವ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆಗಳನ್ನು ಕೊಟ್ಟಿದ್ದಾರೆಯೇ’ ಎಂದು ಪ್ರಶ್ನಿಸಿದರು.

ರಾಜ್ಯದ ರೈತರು ಭೀಕರ ಬರಗಾಲದಿಂದ ತತ್ತರಿಸಿದ್ದಾರೆ. ತಕ್ಷಣ ಸರ್ಕಾರ ಪ್ರತಿ ಎಕರೆಗೆ ₹ 25,000 ಬಿಡುಗಡೆ ಮಾಡಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ’ ಎಂದು ದೂರಿದ ರೇಣುಕಾಚಾರ್ಯ, ಗೃಹಲಕ್ಷ್ಮಿ ಯೋಜನೆ ಹಣ ಯಜಮಾನಿ ಖಾತೆಗೆ ಜಮಾ ಆಗದ ಕೆಲ ಬ್ಯಾಂಕ್ ಪಾಸ್ ಪುಸ್ತಕಗಳನ್ನು ಪ್ರದರ್ಶಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಕೆ.ಸುರೇಶ್, ಪುರಸಭೆ ಸದಸ್ಯ ಧರ್ಮಪ್ಪ, ಮಾಜಿ ಸದಸ್ಯ ಕೆ.ಪಿ.ಕುಬೇಂದ್ರಪ್ಪ, ಮುಖಂಡರಾದ ಸಿ.ಆರ್.ಶಿವಾನಂದ್, ಅರಕೆರೆ ನಾಗರಾಜ್, ಬೀರಪ್ಪ, ನೆಲಹೊನ್ನೆ ಮಂಜುನಾಥ್ ಮಾತನಾಡಿದರು. ಪ್ರತಿಭಟನೆಗೂ ಮುನ್ನ ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.