ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿಯನ್ನು ಫೆ.13ರಿಂದ 15ರವರೆಗೆ ಆಚರಿಸಲಾಗುತ್ತಿದ್ದು, ಸಕಲ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ’ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಟಾನದ ಸಹಯೋಗದಲ್ಲಿ ಜಯಂತಿಯನ್ನು 3 ದಿನಗಳ ಕಾಲ ಆಚರಿಸಲಾಗುತ್ತದೆ. ರಾಜ್ಯ ಸೇರಿದಂತೆ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದು, 3 ಲಕ್ಷಕ್ಕೂ ಹೆಚ್ಚು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಹೇಳಿದರು.

‘ಲಕ್ಷಾಂತರ ಭಕ್ತರು ಭಾಗವಹಿಸುವುದರಿಂದ ಅವರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ, ಸುಗಮ ಸಂಚಾರ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವುದು, ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆ, ಪ್ರಸಾದ ವ್ಯವಸ್ಥೆ ಸೇರಿದಂತೆ ಸ್ನಾನ ಮತ್ತು ಶೌಚಾಲಯದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕಾಗಿದೆ. ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಲು ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗುತ್ತದೆ’ ಎಂದರು.

‘ಜಯಂತ್ಯುತ್ಸವದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು, ಸಚಿವರು, ಗಣ್ಯ ವ್ಯಕ್ತಿಗಳು ಸಹ ಭಾಗವಹಿಸಲಿದ್ದು ಹೆಲಿಪ್ಯಾಡ್ ಸೇರಿದಂತೆ ಶಿಷ್ಟಾಚಾರ ಪಾಲನೆಯ ಉಸ್ತುವಾರಿಗೆ ಅಧಿಕಾರಿಗಳ ತಂಡ ರಚಿಸಲಾಗುತ್ತದೆ ಎಂದರು.

‘ಸೂರಗೊಂಡನಕೊಪ್ಪಕ್ಕೆ ಭಕ್ತರು ನೂರಾರು ಕಿ.ಮಿ. ದೂರದಿಂದ ಬರಿಗಾಲಲ್ಲಿ ಬಂದು ಭಕ್ತಿ ಸಮರ್ಪಿಸುವರು. ಇಲ್ಲಿಗೆ ಕುಟುಂಬ ಸಮೇತರಾಗಿ ಭಾಗವಹಿಸಿ ಭಕ್ತಿ ಭಾವದಿಂದ ಹೋಗುವರು. ಜಯಂತ್ಯುತ್ಸವದ ಆರಂಭದಲ್ಲಿ ಧ್ವಜಾರೋಹಣ, ಮಾಲಾಧಾರಿಗಳ ವಿಸರ್ಜನ, ಸಂಜೆ ಸಂತರ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಹೋಮಕುಂಡ ಭೋಗ್ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.