ದಾವಣಗೆರೆ: ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲಿ ಹೊನ್ನಾಳಿ ಮತ್ತು ಜಗಳೂರಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಹರಿಹರ ಕ್ಷೇತ್ರಕ್ಕೆ ಯಾರು ಎಂಬುದು ಇನ್ನೂ ಗೊತ್ತಾಗಿಲ್ಲ.

ಹೊನ್ನಾಳಿಯಲ್ಲಿ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರಿನಲ್ಲಿ ಮಾಜಿ ಶಾಸಕ ಎಚ್.ಪಿ. ರಾಜೇಶ್ರನ್ನು ಮೀರಿ ಬಿ. ದೇವೇಂದ್ರಪ್ಪ ಟಿಕೆಟ್ ಪಡೆದಿದ್ದಾರೆ. ಎಚ್.ಪಿ. ರಾಜೇಶ್ ಬಂಡಾಯ ಎದ್ದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮತ್ತು ಡಿ.ಜಿ. ಶಾಂತನಗೌಡರ ಮಧ್ಯೆ ಟಿಕೆಟ್ಗಾಗಿ ಭಾರಿ ಪೈಪೋಟಿ ಏರ್ಪಟ್ಟಿತ್ತು. ಈ ಪೈಪೋಟಿಯಲ್ಲಿ ಅಧ್ಯಕ್ಷರನ್ನು ಶಾಂತನಗೌಡ ಹಿಂದಿಕ್ಕಿದ್ದಾರೆ.

ಜಗಳೂರಿನಲ್ಲಿ ಎಚ್.ಪಿ. ರಾಜೇಶ್, ಕೆ.ಪಿ. ಪಾಲಯ್ಯ ಮತ್ತು ಬಿ. ದೇವೇಂದ್ರಪ್ಪ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆದಿತ್ತು. ದೇವೇಂದ್ರಪ್ಪ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರಾಜೇಶ್ ತನ್ನ ಬೆಂಬಲಿಗರ ಸಭೆ ಕರೆದು ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಏ.19ರಂದು ನಾಮಪತ್ರ ಸಲ್ಲಿಸುವುದಾಗಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಹರಿಹರ ಹೊರತುಪಡಿಸಿ ಉಳಿದ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಂತಾಗಿದೆ. ಹರಿಹರದಲ್ಲಿ ಎಸ್. ರಾಮಪ್ಪ ಹಾಲಿ ಶಾಸಕರಾಗಿದ್ದರೂ ಅವರಿಗೆ ಟಿಕೆಟ್ ಘೋಷಣೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.