ದಾವಣಗೆರೆ: ‘ಬಿಜೆಪಿ ಹಿಂದುಳಿದವರ ಜಪ ಮಾಡುತ್ತಿಲ್ಲ. ಮೇಲಾಗಿ ಆ ವರ್ಗಗಳ ಕಲ್ಯಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವರು ಹಿಂದುಳಿದ ವರ್ಗಗಳ ನಾಯಕ ಎಂದು ಬಿಂಬಿಸಿಕೊಂಡು ಆ ವರ್ಗದವರನ್ನು ಓಟ್ ಬ್ಯಾಂಕ್ಗಳನ್ನಾಗಿ ಮಾಡಿಕೊಂಡಿದ್ದಾರೆ. ಆದರೆ ಅವರ ಕಲ್ಯಾಣಕ್ಕೆ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

‘ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿ ಬಿಟ್ಟು ಹೋದರೆ ಹೋಗಲಿ, ಏನು ಮಾಡಲು ಆಗುವುದಿಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಯಾರೂ ಹೋಗುವುದಿಲ್ಲ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಾಕಷ್ಟು ಜನ ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ’ ಎಂದು ಹೇಳಿದರು.

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚೆಕ್ ಮೂಲಕ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸೂಕ್ತ ಮಾಹಿತಿ ಪಡೆದು ಮಾತನಾಡುತ್ತೇನೆ’ ಎಂದು ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.