ಹರಿಹರ: ದೇಶ ಮತ್ತು ಜನರ ಬಗ್ಗೆ ಬಿಜೆಪಿ ನೈಜ ಕಾಳಜಿ ಹೊಂದಿದ್ದು, ಸರ್ಕಾರದಿಂದ ದೇಶದಲ್ಲಿ ಜನಪರ ಆಡಳಿತ ನೀಡಲಾಗುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರಿಗೆ ಸುವರ್ಣ ಭೂ ಚೇತನ, ಶೂನ್ಯ ಬಡ್ಡಿ ದರದಲ್ಲಿ ಸಾಲ, ಮಹಿಳಾ ಸಬಲೀಕರಣಕ್ಕಾಗಿ ಭಾಗ್ಯಲಕ್ಷ್ಮೀ, ಸುವರ್ಣ ಗ್ರಾಮ, ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸೈಕಲ್ ಸೇರಿ ಬಡವರ ಬದುಕನ್ನು ಉತ್ತಮಪಡಿಸುವ ಹತ್ತಾರು ಯೋಜನೆಗಳನ್ನು ರೂಪಿಸಿ, ಯಶಸ್ವಿಯಾಗಿ ಜಾರಿ ಮಾಡುತ್ತಿರುವ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂದರು.

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಬಹುಮತ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ.ಎಸ್. ಈಶ್ವರಪ್ಪ, ‘ಕುಟುಂಬದವರ ನಡುವೆ ಅದ್ದೂರಿಯಾಗಿ ಜನ್ಮದಿನ ಆಚರಿಸುವ ಬದಲು ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸತ್ಕರಿಸುವುದು, ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮೂಲಕ ವೀರೇಶ್ ಅವರು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ’ ಎಂದು ಶ್ಲಾಘಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ‘ಕೋವಿಡ್ ಅವಧಿಯಲ್ಲಿ ದೇಶದಲ್ಲಿ ಆಶಾ ಕಾರ್ಯಕರ್ತೆಯರು ಮಾಡಿದ ಸೇವೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ’ ಎಂದರು.

ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಬಯಲುಸೀಮೆ ಮಂಡಳಿ ಅಧ್ಯಕ್ಷ ಜೀವನಮೂರ್ತಿ, ಮಾಜಿ ಶಾಸಕ ಬಿ.ಪಿ.ಹರೀಶ್, ದಾವಣಗೆರೆ ಉಪ ಮೇಯರ್ ಗಾಯತ್ರಿ ದಂಡೋಜಿರಾವ್, ಮಾಜಿ ಮೇಯರ್ ಅಜಯ್ ಕುಮಾರ್, ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮಾಡಾಳ್ ಮಲ್ಲಿಕಾರ್ಜುನ್, ನಗರಸಭಾ ಸದಸ್ಯರಾದ ರಜನಿಕಾಂತ್, ರಾಘವೇಂದ್ರ ಎಚ್.ಎಸ್., ಸುರೇಶ್ ತೆರದಹಳ್ಳಿ, ಮುಖಂಡರಾದ ಅಜಿತ್ ಸಾವಂತ್, ಕೆ.ಎನ್.ಹಳ್ಳಿ ನಾಗನಗೌಡ್ರು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಐರಣಿ, ಶ್ರೀದೇವಿ ಮಂಜಪ್ಪ, ಶ್ರೀನಿವಾಸ್ ದಾಸಕರಿಯಪ್ಪ, ಶಂಕರ್‌ಸಾ ಲದ್ವಾ, ರೂಪಾ ಕಾಟ್ವೆ, ಪವಾರ್, ಕೆ.ಎನ್. ಗೋವಿಂದರಾವ್, ಲೋಕಿಕೆರೆ ನಾಗರಾಜ್, ಎಚ್.ಎಂ.ಶಿವಾನಂದಪ್ಪ, ಇದ್ದರು.

‘ಅಭ್ಯರ್ಥಿ ಗೆಲುವಿಗೆ ಶ್ರಮಿಸಿ’
‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹರಿಹರ ಕ್ಷೇತ್ರದಿಂದ ಪಕ್ಷದ ಟಿಕೆಟ್‌ಗೆ ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್ ಪ್ರಯತ್ನ ಮಾಡುತ್ತಿದ್ದಾರೆ. ಮುಂದೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಯಾರಿಗೇ ಟಿಕೆಟ್ ಸಿಕ್ಕರೂ ಎಲ್ಲರೂ ಒಗ್ಗಟ್ಟಿನಿಂದ ಗೆಲುವಿಗೆ ಶ್ರಮಿಸಬೇಕು. ವ್ಯಕ್ತಿಗಿಂತ ಪಕ್ಷದ ಗೆಲುವು ನಮ್ಮ ಗುರಿಯಾಗಿರಬೇಕು’ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.