ದಾವಣಗೆರೆ: ನಗರದ ಡಾಲರ್ಸ್ ಕಾಲೊನಿಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಮನೆಯೊಂದರಲ್ಲಿ ಖದೀಮರು ಕೈಚಳಕ ತೋರಿದ್ದು, ಅಪಾರ ಪ್ರಮಾಣದ ವಜ್ರ, ಬಂಗಾರ, ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದಾರೆ.

ಚಿಗಟೇರಿ ಜಿಲ್ಲಾ ಆಸ್ಪತ್ರೆಯ ದಂತ ವೈದ್ಯ ಪಿ.ಎಂ ತಿಪ್ಪೇಸ್ವಾಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಪ್ಪೇಸ್ವಾಮಿ ಅವರು ಕೆಲಸದ ನಿಮ್ಮಿತ್ತ ಮನೆಗೆ ಬೀಗ ಹಾಕಿ ಕುಟುಂಬ ಸದಸ್ಯರೊಡನೆ ಜೂನ್ 2 ರಂದು ಬೆಂಗಳೂರಿಗೆ ತೆರಳಿದ್ದರು. ಜೂನ್ 4ರಂದು ಪರಿಚಿತರು ಕರೆ ಮಾಡಿ ತಿಳಿಸಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀಗ ಮುರಿದು ಒಳ ಹೊಕ್ಕಿರುವ ಕಳ್ಳರು, ವಜ್ರ, ಬಂಗಾರ, ಬೆಳ್ಳಿ ಆಭರಣ, ಟಿವಿ, ಸಿಸಿಟಿವಿ ಡಿವಿಆರ್ ಸೇರಿದಂತೆ ಭಾರಿ ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.