ದಾವಣಗೆರೆ: ‘ಬಿಜೆಪಿಯಲ್ಲಿ ನಾಯಕತ್ವದ ಗೊಂದಲ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಈಗಾಗಲೇ ಮುಂದಿನ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಸ್ವಷ್ಟವಾಗಿ ಹೇಳಿದ್ದಾರೆ. ಅದಕ್ಕೆ ನಾವೆಲ್ಲರೂ ಬದ್ಧ’ ಎಂದು ನಗರಾಭಿವೃದ್ಧಿಸಚಿವ ಬೈರತಿ ಬಸವರಾಜ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಅಂದ ಮಾತ್ರಕ್ಕೆ ನಾಯಕತ್ವ ಗೊಂದಲ ಇದೆ ಎನ್ನುವುದು ಸರಿಯಲ್ಲ. ಅಮಿತ್ ಶಾ ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಮಾತಾಡಿದ್ದಾರೆ.ಯಡಿಯೂರಪ್ಪ, ಜಗದೀಶ ಶೆಟ್ಟರ್ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ.ಎಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದರು.

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿಲ್ಲ. ಅವರುಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ನಾಯಕ.ಅವರ ಪ್ರವಾಸದ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಡಿಯೂರಪ್ಪ, ವಿಜಯೇಂದ್ರ ಕುರಿತಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿದ ಹೇಳಿಕೆ ಬಗ್ಗೆ ಗೊತ್ತಿಲ್ಲ’ ಎಂದು ಹೇಳಿದರು.

ಮೇಕೆದಾಟು–ರಾಜಿ ಇಲ್ಲ

‘ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರದ ನಿಲುವಿನಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರ ಕೈಗೊಳ್ಳುತ್ತೇವೆ. ಮುಖ್ಯಮಂತ್ರಿ ಅವರುಈ ಕುರಿತು ಕಾನೂನಾತ್ಮವಾಗಿ ಪರಿಹಾರ ಕಂಡುಕೊಳ್ಳಲಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬಂಧ ಕ್ಷೇತ್ರ ವಿಂಗಡಣೆ ತರಾತುರಿಯಲ್ಲಿ ಆಗಿತ್ತು. ಮತ್ತೊಮ್ಮೆ ಅದನ್ನುಅಧಿಕಾರಿಗಳ ಸಮ್ಮುಖದಲ್ಲಿ ಮರುಪರಿಶೀಲನೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.