ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಬಿಸಿಯೂಟ ನೌಕರರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಕೇಂದ್ರ, ರಾಜ್ಯ ಸರ್ಕಾರಗಳು ಗಮನಹರಿಸುತ್ತಿಲ್ಲ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ತಡೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದರೂ ಸರ್ಕಾರಗಳು ಅವರಿಗೆ ಸುರಕ್ಷತಾ ಸಲಕರಣೆ ನೀಡಿಲ್ಲ. ಕೆಲವರು ಸುರಕ್ಷಾ ಸಾಧನಗಳಿಲ್ಲದೆ ಮೃತಪಟ್ಟಿದ್ದಾರೆ. ಅಂಗನವಾಡಿ ಖಾಸಗೀಕರಣ ಪ್ರಸ್ತಾಪ ಸೇರಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು. ತಿಂಗಳಿಗೆ ₹ 21 ಸಾವಿರ ವೇತನ, ತಿಂಗಳಿಗೆ ₹ 10 ಸಾವಿರ ಪಿಂಚಣಿ ನೀಡಬೇಕು. ಇಎಸ್ಐ, ಪಿಎಫ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಕೋವಿಡ್ ಕಾರ್ಯದಲ್ಲಿ ತೊಡಗಿಕೊಂಡವರು ಮೃತಪಟ್ಟರೆ ಅವರ ಕುಟುಂಬಕ್ಕೆ ₹ 50 ಲಕ್ಷ ವಿಮಾ ಸೌಲಭ್ಯ ಕಲ್ಪಿಸಬೇಕು. ಕೊರೊನಾದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ಹಾಗೂ ಸೋಂಕಿಗೆ ಒಳಗಾದವರಿಗೆ ಪರಿಹಾರ ನೀಡಬೇಕು. ನಿವೃತ್ತಿಯಾದವರಿಗೆ ಭವಿಷ್ಯ ನಿಧಿ, ಎನ್‌ಪಿಎಸ್ ಬಾಕಿ ಹಣ ಬಿಡುಗಡೆ ಮಾಡಬೇಕು. ತೀವ್ರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರ ಮೂಲಕ ಪ್ರಧಾನಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಮಿತಿ ರಾಜ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ, ಜಿಲ್ಲಾಧ್ಯಕ್ಷೆ ಎಂ.ಬಿ.ಶಾರದಮ್ಮ, ಪ್ರಮುಖರಾದ ಆವರಗೆರೆ ವಾಸು, ಆವರಗೆರೆ ಚಂದ್ರು, ಎನ್.ಎಚ್. ರಾಮಣ್ಣ, ವಿಶಾಲಾಕ್ಷಿ, ಎಸ್.ಎಸ್. ಮಲ್ಲಮ್ಮ, ಜಿ.ರೇಣುಕಮ್ಮ, ಸುಧಾ, ಕಾಳಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.