ಹರಿಹರ: ಗ್ಯಾರಂಟಿಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ತಾಲ್ಲೂಕಿನ ಬೆಳ್ಳೂಡಿ ಗ್ರಾಮಕ್ಕೆ ಕಾಗೇರಿ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡ ಸೋಮವಾರ ಭೇಟಿ ನೀಡಿ, ನಂತರ ರೈತರೊಂದಿಗೆ ಅವರು ಮಾತುಕತೆ ನಡೆಸಿದರು.

‘ಬೆಳೆ ಹಾನಿಗೊಳಗಾದ ರೈತರು ಚಿಂತಿಸದಿರಿ. ನಿಮ್ಮ ಜೊತೆಯಲ್ಲಿ ಬಿಜೆಪಿ ಸದಾ ಇದೆ. ಬರ ಅಧ್ಯಯನ ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ರೈತರ ಪರವಾಗಿ ಧ್ವನಿ ಎತ್ತಲಾಗುವುದು’ ಎಂದು ಭರವಸೆ ನೀಡಿದರು.

ಗ್ಯಾರಂಟಿ ನೀಡುವುದರಲ್ಲಿಯೇ ಸುಸ್ತಾಗಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡುತ್ತಿದೆ. ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ ₹40,000 ಬರ ಪರಿಹಾರ ನೀಡಬೇಕು. 7 ಗಂಟೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ ಯೋಜನೆಯ ಪ್ರೋತ್ಸಾಹಧನ ತಲುಪುತ್ತಿದೆಯೇ ಎಂದು ರೈತರಿಂದ ಮಾಹಿತಿ ಪಡೆದರು. ಯೋಜನೆಯಿಂದ ವಂಚಿತರಾಗಿರುವ ರೈತರನ್ನು ಗುರುತಿಸಿ ನೋಂದಣಿ ಮಾಡಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎ.ಎಚ್.ಶಿವಯೋಗಿಸ್ವಾಮಿ, ಪ್ರೊ.ಲಿಂಗಣ್ಣ, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ, ಮುಖಂಡರಾದ ಎಲ್.ಎನ್.ಕಲ್ಲೇಶ್, ಜಗದೀಶ್, ಸತೀಶ್, ಲೋಕಿಕೆರೆ ನಾಗರಾಜ್, ಲಿಂಗರಾಜ್, ಮಹಾಂತೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.