ದಾವಣಗೆರೆ: ಜಿಲ್ಲಾ ಫುಟ್‌ಬಾಲ್ ಅಸೋಸಿಯೇಷನ್‌ನಿಂದ ನಗರದಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಟೂರ್ನಿ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು.

ಕ್ರೀಡೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ಖೇಲೊ ಇಂಡಿಯಾ ಅಡಿಯಲ್ಲಿ ಜನವರಿ 6ರಿಂದ ಫೆಬ್ರುವರಿ 10ರವರೆಗೆ ಪಂದ್ಯಾವಳಿ ನಡೆಯಲಿದೆ. 13ರಿಂದ 15 ವರ್ಷದೊಳಗಿನ ವಿಭಾಗದಲ್ಲಿ ಪಂದ್ಯಗಳು ನಡೆಯಲಿದೆ. 10 ತಂಡಗಳಿಂದ 200ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಜ.6ರಂದು ಮಧ್ಯಾಹ್ನ 1ಕ್ಕೆ ಎಸ್.ಎಸ್. ಕೇರ್ ಟ್ರಸ್ಟ್‌ನ ಟ್ರಸ್ಟಿ ಪ್ರಭಾ ಮಲ್ಲಿಕಾರ್ಜುನ್ ಟೂರ್ನಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ದುರ್ಗಾಶ್ರೀ ಎನ್. ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಪಾಲಿಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕಾ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಸೇರಿದಂತೆ ಪಾಲಿಕೆಯ ಮಹಿಳಾ ಸದಸ್ಯರು, ಕಾಂಗ್ರೆಸ್ ಮುಖಂಡರು ಭಾಗವಹಿಸುವರು ಎಂದರು.

ಜ. 7ರಂದು ಪಂದ್ಯಾವಳಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡುವರು. ರಾಜ್ಯ ಫುಟ್‌ಬಾಲ್ ಅಸೋಸಿಯೇಷನ್ ಅಧ್ಯಕ್ಷ ಹ್ಯಾರೀಸ್, ಮುಖಂಡರಾದ ಅಥಣಿ ವೀರಣ್ಣ, ಎಚ್.ಬಿ. ಮಂಜಪ್ಪ, ಮೇಯರ್ ವಿನಾಯಕ ಪೈಲ್ವಾನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು. ಫೆ. 10ರಂದು ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಜೇತರಿಗೆ ಬಹುಮಾನ ವಿತರಿಸುವರು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಹಮ್ಮದ್ ರಫಿ, ಎಸ್.ಎಸ್. ಗಿರೀಶ್, ಅಲ್ಲಾವಲಿ ಮುಜಾಹಿದ್ ಖಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.