ಜಗಳೂರು: ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಬಡತನ, ಅನಕ್ಷರತೆ, ದಾರಿದ್ರ್ಯದಿಂದ ನರಳುತ್ತಿದ್ದ ಭಾರತದಲ್ಲಿ ಮೊಟ್ಟ ಮೊದಲ ಬಾರಿ ಕೈಗಾರಿಕೆಗಳು, ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ ಮತ್ತು ಆಸ್ಪತ್ರೆಗಳನ್ನು ನಿರ್ಮಿಸಿದ ಕಾಂಗ್ರೆಸ್ ಪಕ್ಷ ದೇಶಕ್ಕೆ ತಂದೆ, ತಾಯಿ ಇದ್ದಂತೆ ಎಂದು ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚಿಕ್ಕಮ್ಮನಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರಸ್ ಆಡಳಿತದಲ್ಲಿ ನಿರ್ಮಾಣವಾದ ದೇಶದ ಪ್ರಮುಖ ಸಂಸ್ಥೆಗಳನ್ನು ಪ್ರಧಾನಿ ಮೋದಿ ಅವರು ಮಾರಾಟ ಮಾಡುವ ಹಾಗೂ ಖಾಸಗೀಕರಣ ಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆಯಾಗಿದ್ದರೂ ಸಹ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಯನ್ನು ದುಪ್ಪಟ್ಟು ಹೆಚ್ಚಿಸಿದ್ದು, ಮಧ್ಯಮ ಹಾಗೂ ಬಡ ಸಮುದಾಯದವರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಜನ ಸಾಮಾನ್ಯರ ಕಷ್ಟಗಳನ್ನು ಪರಿಹರಿಸಲಿಕ್ಕಾಗಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಲ್ಲಿ ಪ್ರತಿ ಕುಟುಂಬಕ್ಕೆ ₹1 ಲಕ್ಷ ನೀಡಲಿದೆ. ಶ್ರೀಮಂತರ ಪರವಾಗಿರುವ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

‘ಬಿಜೆಪಿ ಸರ್ಕಾರ ಸುಳ್ಳಿನಮೇಲೆ ರಾಜಕಾರಣ ಮಾಡುತ್ತಿದೆ. ಕಾಡುಗೊಲ್ಲರಿಗೆ ಮಿಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಸ್ಪಂದಿಸುತ್ತಿಲ್ಲ. ಸಂವಿಧಾನ ವಿರೋಧಿ ನೀತಿ ಜಾರಿಗೊಳಿಸಿ ಶೋಷಿತ ಸಮುದಾಯಗಳನ್ನು ದಮನ ಮಾಡಲಾಗುತ್ತಿದೆ. ಯಾದವ ಸಮಾಜದವರು ಜಾಗೃತರಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು’ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಮನವಿ ಮಾಡಿದರು.

‘ನನ್ನ ಹುಟ್ಟೂರು ಚಿಕ್ಕಮ್ಮಮಹಟ್ಟಿಗೆ ₹5 ಕೋಟಿ ಅನುದಾನ ನೀಡಿದ್ದೇನೆ. ದೇವಸ್ಥಾನ ಅಭಿವೃದ್ಧಿ ಹಾಗೂ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧನಾಗಿರುವೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೆಚ್ಚಿನ ಮತ ನೀಡಬೇಕು’ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ತಾಲ್ಲೂಕಿನ 15ಕ್ಕೂ ಹೆಚ್ಚು ಗೊಲ್ಲರಹಟ್ಟಿಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.

ಕೆಪಿಸಿಸಿ ಎಸ್. ಟಿ .ಘಟಕದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಮುಖಂಡರಾದ ತಿಪ್ಪೇಸ್ವಾಮಿ ಗೌಡ, ಚಿತ್ತಪ್ಪ, ಪುರುಷೋತ್ತಮ ನಾಯ್ಕ, ಜೀವಣ್ಣ, ರಂಗಸ್ವಾಮಿ, ವಾಸುದೇವ್, ಕಾಟಪ್ಪ, ಮರೇನಹಳ್ಳಿ ಬಸವರಾಜ್, ಸಣ್ಣಸೂರಯ್ಯ, ಚಿಕ್ಕಮಲ್ಲನಹೊಳೆ ತಿಪ್ಪೇಸ್ವಾಮಿ, ಮಂಜಣ್ಣ, ಬಿ. ಮಹೇಶ್ವರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.