ಹುಬ್ಬಳ್ಳಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡಾಟ ಹೀಗೆ ಮುಂದುವರಿದರೆ ಅದನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಸರ್ಕಾರ ಚಿಂತಿಸಬೇಕು ಎಂದು ಚಿತ್ರ ನಟ ಪ್ರೇಮ್ ಹೇಳಿದರು.

ಭಾನುವಾರ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಸಂಘಟನೆಗಳಿರಲಿ ದೇಶದಲ್ಲಿ ಶಾಂತಿ ಕಾಪಾಡಬೇಕು. ಯಾವುದಾದರೂ ಸಂಘಟನೆಯಿಂದ ಪದೇ ಪದೇ ಶಾಂತಿ ಕದಡುತ್ತದೆ ಎಂದಾದರೆ ಅದನ್ನು ನಿಷೇಧಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು ಎಂದರು.

ಕನ್ನಡಿಗರದ್ದು ವಿಕೃತ ಮನಸ್ಥಿತಿ ಎಂದ ಮಹಾ ಸಿಎಂ ಉದ್ಧವ್ ಠಾಕ್ರೆ

ಎಂಇಎಸ್ ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವದರಿಂದ ಏನನ್ನೂ ಸಾಧಿಸುವುದಿಲ್ಲ. ಅಲ್ಲದೆ, ಎಂಇಎಸ್ ಬಗ್ಗೆ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ. ಆದರೆ, ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ. ನಾವು ಶಾಂತಿ ಪ್ರಿಯರು. ಇದನ್ನು ವಿರೋಧಿಸಿ ಕನ್ನಡ ಚಿತ್ರರಂಗ ಹೋರಾಟಕ್ಕೆ ಇಳಿದರೆ, ನಮ್ಮವರಿಗೆ ತೊದರೆಯಾಗಲಿದೆ ಎಂದು ಅಭಿಪ್ರಾಯೊಟ್ಟರು.

ನಂತರ, ನಟ ಪ್ರೇಮ್ ಸಿದ್ಧಾರೂಢ ಮಠದ ಗೋಶಾಲೆಗೆ ಭೇಟಿ ನೀಡಿ, ಗೋವುಗಳ ಮಾಹಿತಿ ಪಡೆದರು. ಕರುವನ್ನು ಎತ್ತುಕೊಂಡು ಸಂಭ್ರಮಿಸಿದರು. ಅವರ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡು ಬಂದಿತು.

ಮಂಗ Vs ನಾಯಿ: ಸಾಮಾಜಿಕ ಜಾಲತಾಣಗಳಲ್ಲಿ ಏನಿದು ಗ್ಯಾಂಗ್ ವಾರ್!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.