ಅಳ್ನಾವರ: ‘ಕನ್ನಡ ನಾಡನ್ನು ಒಗ್ಗೂಡಿಸುವಲ್ಲಿ ಧಾರವಾಡ ಜಿಲ್ಲೆಯ ಅದರಗುಂಚಿಯ ಶಂಕರಗೌಡರ ಪಾತ್ರ ಹಿರಿದು. ಅವರ ನಡೆ ಎಲ್ಲರಿಗೂ ಆದರ್ಶಪ್ರಾಯವಾಗಿದೆ’ ಎಂದು ಧಾರವಾಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಂಗಮನಾಥ ಲೋಕಾಪೂರ ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಜಾನಪದ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ, ಸರ್ಕಾರಿ ಪ್ರೌಢಶಾಲೆ ಹಾಗೂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಅದರಗುಂಚಿ ಶಂಕರಗೌಡರ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿಯವರ ಆದರ್ಶ ಅಳವಡಿಸಿಕೊಂಡಿದ್ದ ಶಂಕರಗೌಡರು ಹೋರಾಟವನ್ನೇ ಜೀವನವನ್ನಾಗಿಸಿಕೊಂಡು ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದರು. ಅವರ ಜೀವನ, ಸಾಧನೆ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸಲು ಅವರ ಪುತ್ಥಳಿಯನ್ನು ವಿಧಾನಸೌಧದಲ್ಲಿ ಅನಾವರಣಗೊಳಿಸಬೇಕು ಎಂದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಸಹ ಕಾರ್ಯದರ್ಶಿ ಶಂಕರ ಕುಂಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅದರಗುಂಚಿ ಶಂಕರಗೌಡರ ಪ್ರತಿಷ್ಠಾನದ ಅಧ್ಯಕ್ಷ ವಿರುಪಾಕ್ಷಗೌಡ ಜಿ.ಪಾಟೀಲ, ಖಜಾಂಚಿ ಗೌಡಪ್ಪಗೌಡ ಪಾಟೀಲ, ವಿ.ಜಿ.ಪಾಟೀಲ ಮಾತನಾಡಿದರು. ತಾಲ್ಲೂಕು ಜಾನಪದ ಪರಿಷತ್
ಅಧ್ಯಕ್ಷೆ ಪೂರ್ಣಿಮಾ ಮುತ್ನಾಳ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಜಾನಪದ ಅಕಾಡೆಮಿ ಪುರಸ್ಕಾರಕ್ಕೆ ಭಾಜನರಾಗಿರುವ ದತ್ತಿ ದಾನಿ ರಾಮಣ್ಣ ಪ್ರತಿಷ್ಠಾನದ ರಾಮು ಮೂಲಗಿ ಅವರನ್ನು ಸನ್ಮಾನಿಸಲಾಯಿತು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜ ಸಬನೀಸ್ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂಜಯ ಮಾಳಿ, ಬಸವರಾಜ ಮೂಡಬಾಗಿಲ, ಸುಮಾ ಸೊಪ್ಪಿ, ಸುವರ್ಣಾ ಕಡಕೋಳ, ಜಯಶ್ರೀ ಉಡುಪಿ, ಜೊಗಾ ಶೆಟ್ಟರ, ಮಂಜುಳಾ ಜ್ಯೋತಿ, ಮಹಾಂತೇಶ ಹುಬ್ಬಳ್ಳಿ, ಸುರೇಂದ್ರ ಕಡಕೋಳ ಇದ್ದರು.

ಶಿವಾನಂದ ಭಾವಿಕಟ್ಟಿ ಸ್ವಾಗತಿಸಿದರು. ಶಿಕ್ಷಕ ಸುನೀಲ ಪಾಟೀಲ ನಿರೂಪಿಸಿದರು. ಪ್ರವೀಣ ಪವಾರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.