ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾಮೀಜಿಗಳು ಮೂಗು ತೂರಿಸಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ 

Published 4 ಜುಲೈ 2024, 16:00 IST
Last Updated 4 ಜುಲೈ 2024, 16:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ಅಥವಾ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಷಯದಲ್ಲಿ ಸ್ವಾಮೀಜಿಗಳು ಮೂಗು ತೂರಿಸಬಾರದು’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

‘ಇದು ಆ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಈ ಬಗ್ಗೆ ಧರ್ಮಗುರುಗಳು, ಸ್ವಾಮೀಜಿಗಳ ಸಲಹೆ ಕೇಳಿದಾಗ ಮಾತ್ರ ಹೇಳಬೇಕು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಹೋರಾಟ ನಡೆಸಲಾಗುತ್ತಿದೆ. ಈ ಹಿಂದೆ ಹೋರಾಟ ನಡೆಸಿದಾಗ ಚುನಾವಣೆ ನಂತರ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮತ್ರಿ ಸಿದ್ದರಾಮಯ್ಯ ಹೇಳಿದ್ದರು. ಈಗ ಆ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT