ಪ್ರಜಾವಾಣಿ ವಾರ್ತೆ

ಹುಬ್ಬಳ್ಳಿ: ‘ಫ್ರೀಡಂ ಆಯಿಲ್’ ಪ್ರಸ್ತುತಿ ಮತ್ತು ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗದ ಸಹಯೋಗದೊಂದಿಗೆ ‘ಭೂಮಿಕಾ ಕ್ಲಬ್’ ಮಹಿಳೆಯರ ವಿಶೇಷ ಕಾರ್ಯಕ್ರಮ ಶನಿವಾರ (ಅಕ್ಟೋಬರ್ 7) ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ನಟಿ ಅನು ಪ್ರಭಾಕರ್ ಮತ್ತು ಮೇಯರ್ ವೀಣಾ ಭರದ್ವಾಡ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಾನಪದ ಸಂಶೋಧನಾ ಕೇಂದ್ರದ ತಂಡದ ಸದಸ್ಯರು ಜಾನಪದ ಸಾಂಪ್ರದಾಯಿಕ ಆಚರಣೆ ಕುರಿತು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸುವರು. ಹಬ್ಬಗಳ ಅರ್ಥಪೂರ್ಣ ಆಚರಣೆ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಆರ್ಜೆ ಮೇಘಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಜಿ.ಪದ್ಮಾವತಿ ಮತ್ತು ಸಾಹಿತಿ ಸುನಂದಾ ಕಡಮೆ ಭಾಗವಹಿಸುವರು.

ಹಬ್ಬಗಳಲ್ಲಿ ತಯಾರಿಸುವ ವಿಶೇಷ ಖಾದ್ಯಗಳ ಕುರಿತು ಬಾಣಸಿಗ ಆದರ್ಶ ತಟಪತಿ ಮತ್ತು ಪೋಷಕಾಂಶಗಳ ಕುರಿತು ಡಾ.ಸಿದ್ಧಲಿಂಗೇಶ ಸಾಲಿಮಠ ಮಾತನಾಡುವರು. ರಂಗಕರ್ಮಿ ಯಶವಂತ ಸರದೇಶಪಾಂಡೆ ಅವರು ಲಘುಹಾಸ್ಯ ಕಾರ್ಯಕ್ರಮ ನಡೆಸಿಕೊಡುವರು. ಸಭಿಕರು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನ ಗೆಲ್ಲಬಹುದು. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಸರು ನೋಂದಾಯಿಸಿ. ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9880908652.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.