ಹುಬ್ಬಳ್ಳಿ: ಕೋವಿಡ್ ಪ್ರಕರಣಗಳು ಕಡಿಮೆಯಾದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ಬಕ್ರೀದ್ ದಿನದಂದು ಮಸೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಬೇಕು ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ ಅವಕಾಶ ನೀಡಲಾಗಿದ್ದು, ನಂತರ ಮತ್ತೆ 50 ಜನರು ಪಾಳೆ ರೂಪದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ನಡೆದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

60 ವಯಸ್ಸು ಮೇಲ್ಪಟ್ಟ ಹಾಗೂ 10 ವರ್ಷದ ಕೆಳಗಿನವರಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿರುವುದಿಲ್ಲ. ಅವರು ಮನೆಯಲ್ಲಿಯೇ ಪ್ರಾರ್ಥಿಸಬೇಕು. ಮಸೀದಿಗೆ ಬರುವ ಮುನ್ನ ದೇಹದ ತಾಪಮಾನ ಪರೀಕ್ಷೆ ಮಾಡಿಸಿರಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡುವುದನ್ನು ನಿಷೇಧಿಸಲಾಗಿದೆ.

ಆಸ್ಪತ್ರೆ, ಶಾಲಾ ಕಾಲೇಜು ಆವರಣ, ಆಟದ ಮೈದಾನ , ಪುಟ್ಪಾತ್ ಹಾಗೂ ಉದ್ಯಾನ ಒಳಗಡೆ ಮತ್ತು ಹೊರಗಡೆ ಬಲಿದಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು.

ಕೋವಿಡ್ ನಿಯಮಗಳ ಪಾಲನೆ ಜೊತೆಗೆ ಈದ್ಗಾ ಮೈದಾನದಲ್ಲಿ 50 ಜನರಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಸಾಮೂಹಿಕವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸುತ್ತೇನೆ. ಸರ್ಕಾರ ಆದೇಶದ ಪ್ರಕಾರ ರಾಜ್ಯದಾದ್ಯಂತ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದರು.

ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು ಸೇರಿದಂತೆ ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.