ಹುಬ್ಬಳ್ಳಿ: ಮೂರು ತಿಂಗಳ ಹಿಂದೆ ನಗರದಲ್ಲಿ ನಡೆದಿದ್ದ ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು, ಆರೋಪಿಗಳಿಬ್ಬರ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ ಮುಕ್ತೇದಾರ ಅವರು, ಆರೋಪಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ. 800ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯು ಕೊಲೆಗೆ ಕಾರಣವಾದ ಗುರೂಜಿ ಮತ್ತು ಆರೋಪಿಗಳಿಬ್ಬರ ನಡುವಿನ ಆಸ್ತಿ ವಿವಾದ ಸೇರಿದಂತೆ, ಇತರ ವಿಷಯಗಳಿಗೆ ಸಂಬಂಧಿಸಿದ ವಿವರಗಳನ್ನು ಒಳಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಉಣಕಲ್ ಬಳಿಯ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಜುಲೈ 5ರಂದು ಮಹಾಂತೇಶ ಶಿರೂರ ಮತ್ತು ಮಂಜುನಾಥ ಮರೇವಾಡ ಗುರೂಜಿಯನ್ನು ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆ ನಡೆದ ನಾಲ್ಕು ತಾಸಿನೊಳಗೆ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದ ತನಿಖೆಗಾಗಿ ಪೊಲೀಸ್ ಕಮಿಷನರ್ ಲಾಭೂರಾಮ್ ಅವರು, ಎಸಿಪಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ಗುರೂಜಿ ಮತ್ತು ಆರೋಪಿಗಳ ನಡುವೆ ಇದ್ದ ವ್ಯವಹಾರಗಳು ಸೇರಿದಂತೆ, ವಿವಿಧ ಆಯಾಮಗಳ ಕುರಿತು ತಂಡವು ಸತತ ಮೂರು ತಿಂಗಳು ತನಿಖೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.