ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ-ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸಿದರು.

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ, ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು. ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

ಮೋದಿ, ಶಾ, ಬಿಎಸ್ವೈಆಶೀರ್ವಾದದಿಂದ ಈ ಸ್ಥಾನಕ್ಕೆ ಬಂದೆ: ಮುಖ್ಯಮಂತ್ರಿ ಬೊಮ್ಮಾಯಿ

ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಸೇರಿದಂತೆ, ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ನೆರೆದಿದ್ದರು.

ಸಚಿವ ಸಂಪುಟ ರಚನೆಗೆ ಒತ್ತಡ ಸಹಜ: ಸಿಎಂಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.