ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಉಪಮೇಯರ್ ಅಭ್ಯರ್ಥಿ ಸತೀಶ ಹಾನಗಲ್ ಅವರು ಓಂ ಚಿಹ್ನೆ ಇರುವ ಶಾಲು ಹಾಕಿಕೊಂಡು ಬಂದಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಪಾಲಿಕೆಯ 22ನೇ ಅವಧಿಯ ಮೇಯರ್ ಉಪಮೇಯರ್ ಆಯ್ಕೆಗೆ ಪಾಲಿಕೆಯ ಧಾರವಾಡದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಂಗಣದಲ್ಲಿ ಚುನಾವಣೆ ನಡೆಯುತ್ತಿದೆ.

ಸತೀಶ ಹಾನಗಲ್ ಅವರು ಕೇಸರಿ ಶಾಲು ಹಾಕಿಕೊಂಡು ಸಭಾಂಗಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು.

ಇದನ್ನು ಗಮನಿಸಿದ ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಸುವರ್ಣ ಕಲ್ಲಕುಂಟ್ಲ ಮತ್ತು ದೊರೆರಾಜ ಮಣಿಕುಂಟ್ಲ ಆಕ್ಷೇಪ ವ್ಯಕ್ತಪಡಿಸಿದರು. ಅವರ ನಾಮಪತ್ರ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಪ್ರತಿಕ್ರಿಯಿಸಿ, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದು ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.