ಹುಬ್ಬಳ್ಳಿ: 'ಕೋವಿಡ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರದ ಕುರಿತು ನಿವೃತ್ತ ನ್ಯಾ.ಮೈಕಲ್ ಕುನ್ಹಾ ನೇತೃತ್ವದ ಆಯೋಗ ನೀಡಿರುವ ವರದಿ, ಸಂಪುಟ ಉಪಸಮಿತಿ ಅಧ್ಯಯನ ಮಾಡುತ್ತಿದೆ. ಉಪಸಮಿತಿ ವರದಿ ಬಂದ ನಂತರ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

'ಗೊಡ್ಡು ಬೆದರಿಕೆಗೆ ಹೆದರಲ್ಲ' ಎನ್ನುವ ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, 'ಇದ್ಯಾವುದೂ ಗೊಡ್ಡು ಬೆದರಿಕೆಯಲ್ಲ. ಆಯೋಗವೊಂದನ್ನು ತನಿಖೆಗೆ ರಚಿಸಿ, ಅದು ನೀಡಿದ ವರದಿ ಆಧಾರದ ಮೇಲೆಯೇ ಸಂಪುಟ ಉಪಸಮಿತಿಯ ಸಚಿವ ದಿನೇಶ ಗುಡೂರಾವ್ ಪ್ರತಿಕ್ರಿಯೆ ನೀಡಿದ್ದು. ಮುಂದಿನ ದಿನಗಳಲ್ಲಿ ಕ್ರಿಮಿನಲ್ ವಿಚಾರಣೆ ಆರಂಭವಾದಾಗ ಅವರ ನಿಜಬಣ್ಣ ಬಯಲಾಗಲಿದೆ' ಎಂದರು.

'ನ್ಯಾಯಾಂಗದ ಬಗ್ಗೆ ನಂಬಿಕೆಯಿದೆ' ಎನ್ನುವ ಯಡಿಯೂರೂಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, 'ನ್ಯಾಯಾಂಗ ಯಡಿಯೂರಪ್ಪ ಅವರಿಗೆ ಮಾತ್ರ ಇದೆಯೇ? ಅದು ಇರುವುದು ನ್ಯಾಯ ಕೊಡುವುದಕ್ಕೆ, ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಲು. ತಪ್ಪು ಅಂತ ಸಾಬೀತಾದ ಮೇಲೆ ಯಡಿಯೂರಪ್ಪ ಏನು ಮಾಡಲು ಸಾಧ್ಯ' ಎಂದು ಪ್ರಶ್ನಿಸಿದರು.

'ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರ ಕೊಲೆಗೆ ಸಂಚು ನಡೆದಿದ್ದು ನಿಜವಾಗಿದ್ದರೆ, ಅಂದೇ ಯಾಕೆ ಪ್ರಕರಣ ದಾಖಲಿಸಲಿಲ್ಲ? ಅವರಿಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆಯಲ್ಲವೇ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
.'ಮಹಾ' ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ನಿಂದ ₹ 700 ಕೋಟಿ ವಸೂಲಿ: ಮೋದಿ ಆರೋಪ.ಪ್ರಧಾನಿ ಹುದ್ದೆಯ ಗೌರವ ಕಳೆದುಕೊಳ್ಳಬೇಡಿ: ಮೋದಿಗೆ ಸಿದ್ದರಾಮಯ್ಯ ಮನವಿ.
ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆ 'ಕರ್ನಾಟಕ ರಾಜ್ಯದ ಅಬಕಾರಿ ಇಲಾಖೆಯ 700 ಕೋಟಿ ಲೂಟಿ ಮಾಡಿ ಚುನಾವಣೆ ನಡೆಸುತ್ತಿದೆ' ಎನ್ನುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ, 'ಪ್ರಧಾನಿ ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ. ಸುಳ್ಳಿಗೂ ಹಿತಿಮಿತಿ ಇರಬೇಕು. ಅಷ್ಟು ದೊಡ್ಡ ಹುದ್ದೆಗೆ ಅದು ಶೋಭೆ ತರುವುದಿಲ್ಲ. 17 ಮಂದಿ ಶಾಸಕರನ್ನು ಯಾವ ಹಣದಲ್ಲಿ ಖರೀದಿ ಮಾಡಿದರು, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗುವಾಗ ಎರಡು ಸಾವಿರ ಕೋಟಿ ನೀಡಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಯತ್ನಾಳ ಅವರೇ ಹೇಳಿದ್ದಾರೆ. ಆ ಹಣ ಎಲ್ಲಿಂದ ಬಂತು?' ಎಂದು ತಿರುಗೇಟು ನೀಡಿದರು.

'ಮುಡಾ ನಿವೇಶನ ನೋಂದಣಿಗೆ ತಹಶೀಲ್ದಾರ್ ಹಣ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸೋಷಿಯಲ್ ಮಿಡಿಯಾದಲ್ಲಿ ಮಾಡಿರುವ ಆರೋಪ ಸುಳ್ಳು. ತಹಶೀಲ್ದಾರ್ ಚೆಕ್ ಮೂಲಕ ಏನಾದರೂ ಹಣ ನೀಡಿದ್ದಾರೆಯೇ? ದಾನಪತ್ರ ಮಾಡಲು ನನ್ನ ಭಾವಮೈದ ಹಣ ಕೊಟ್ಟಿದ್ದಾರೆ. ನಾನು, ನನ್ನ ಪತ್ನಿ ಸಹಿಪತ್ರ ಮಾಡಲು ಹಣ ನೀಡಿದ್ದೇವೆ' ಎಂದರು.

‘ಪಿಪಿಇ ಕಿಟ್: ಕಾನೂನು ಪ್ರಕಾರ ಖರೀದಿ’

‘ಕೋವಿಡ್ ಸಂದರ್ಭ ಬಿಜೆಪಿ ಹಗರಣ ನಡೆಸಿದೆ’ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಭಾನುವಾರ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಸಂಸದ ಬಸವರಾಜ ಬೊಮ್ಮಾಯಿ, ‘ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಇಲ್ಲದ ಕಾರಣ, ಸೋಂಕು ತಗುಲಿ ಜನ ಮೃತಪಡುತ್ತಿದ್ದರು. ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದ್ದಾಗ, ವೈದ್ಯರು ಪಿಪಿಇ ಕಿಟ್ ಇಲ್ಲದಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಪಿಪಿಇ ಕಿಟ್ ಇಲ್ಲದಿದ್ದರೆ ಸಾಯುತ್ತಾರೆ ಎನ್ನುವ ಭಯ ಸಹ ಇತ್ತು. ಆಗ ಅವುಗಳನ್ನು ಕಾನೂನು ಪ್ರಕಾರವೇ ಖರೀದಿ ಮಾಡಿದ್ದೆವು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದೆ. ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸಲು ಹೀಗೆ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.