ಧಾರವಾಡ: ‘ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ನೇಹಾ ಕೊಲೆ ಪ್ರಕರಣ ಖಂಡನೀಯ. ನಗರದ ಅಂಜುಮನ್ ವಿದ್ಯಾಲಯದ ಒಂದು ಬ್ಲಾಕ್ ಅಥವಾ ಕೊಠಡಿಗೆ ನೇಹಾ ಹೆಸರು ನಾಮಕರಣ ಮಾಡುತ್ತೇವೆ’ ಎಂದು ಧಾರವಾಡ ಅಂಜುಮನ್ ಇ ಇಸ್ಲಾಂ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದೊಳಗೆ ಈ ನಿಟ್ಟಿನಲ್ಲಿ ಕ್ರಮ ವಹಿಸುತ್ತೇವೆ. ನೇಹಾ ಅವರ ಪೋಷಕರಿಂದಲೇ ಆ ಬ್ಲಾಕ್ ಅಥವಾ ಕೊಠಡಿ ಉದ್ಘಾಟನೆ ಮಾಡಿಸುತ್ತೇವೆ’ ಎಂದರು.

‘ಇಂಥ ಪ್ರಕರಣಗಳು ಮರುಕಳಿಸಬಾರದು. ವಿದ್ಯಾರ್ಥಿನಿಯರ ಸುರಕ್ಷತೆ ನಿಟ್ಟಿನಲ್ಲಿ ಅಂಜುಮನ್ ವಿದ್ಯಾಲಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಸಂಸ್ಥೆಯ ಸಮಿತಿ ಸಭೆಯಲ್ಲಿ ಈಗಾಗಲೇ ಈ ಕುರಿತು ಚರ್ಚಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

‘ನೇಹಾ ಕೊಲೆ ಪ್ರಕರಣದ ಆರೋಪಿಗೆ ಫಯಾಜ್ಗೆ ಕಠಿಣ ಶಿಕ್ಷೆಯಾಗಬೇಕು. ಇಂಥ ಪ್ರಕರಣಗಳ ವಿಚಾರಣೆಗಾಗಿ ಸರ್ಕಾರ ಪ್ರತ್ಯೇಕ ತ್ವರಿತ ಕೋರ್ಟ್ ಸ್ಥಾಪನೆ ಮಾಡಬೇಕು. ಪ್ರಕರಣಗಳು ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಮೌನ ಮೆರವಣಿಗೆ, ಸ್ವಯಂಪ್ರೇರಿತವಾಗಿ ಅಂಗಡಿ ಬಂದ್ ಇಂದು

ಧಾರವಾಡ: ನೇಹಾ ಕೊಲೆ ಖಂಡಿಸಿ ಮತ್ತು ಪ್ರಕರಣದ ಆರೋಪಿ ಫಯಾಜ್ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಏಪ್ರಿಲ್ 22ರಂದು ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು. ಬೆಳಿಗ್ಗೆ 10 ಗಂಟೆಗೆ ಅಂಜುಮನ್ ಸಂಸ್ಥೆ ಆವರಣದಿಂದ ಮೆರವಣಿಗೆ ಹೊರಟು ಜುಬಿಲಿ ವೃತ್ತ, ಕೋರ್ಟ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು. ಸ್ವಯಂಪ್ರೇರಿತವಾಗಿ ಅಂಗಡಿ, ಮಳಿಗೆಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಂದ್ ಮಾಡುವುದಾಗಿ ಸಮುದಾಯದವರು ಹೇಳಿದ್ದಾರೆ ಎಂದರು.

ಬಶೀರ್ ಜಹಗೀರದಾರ್, ಖಾಜಿರ್.ಸರಗಿರೊ, ರಫೀಕ್ ಶಿರಹಟ್ಟಿ, ಶಫಿಕ್ ಹಳ್ಳಿಮನಿ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.