ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ‘ಮುಖ್ಯಮಂತ್ರಿ ಮನೆಗೆ ಚಲೋ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕ ಮಕ್ಕಳ ಶಿಕ್ಷಣಕ್ಕಾಗಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡುತ್ತಿದ್ದ ಶೈಕ್ಷಣಿಕ ಧನ ಸಹಾಯವನ್ನು ಶೇ 60 ರಿಂದ ಶೇ 80 ವರೆಗೆ ಕಡಿತ ಮಾಡಿರುವುದು ಸರಿಯಲ್ಲ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಹೈಕೋರ್ಟ್ ಆದೇಶದಂತೆ ಉಳಿದ ಎಲ್ಲಾ ಅರ್ಜಿದಾರರಿಗೆ ಶೈಕ್ಷಣಿಕ ಧನಸಹಾಯ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನೈಜ ಕಾರ್ಮಿಕರ ನೋಂದಣಿ ಮತ್ತು ಮರು ನೋಂದಣಿ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು. ಅರ್ಜಿದಾರರಿಗೆ ಕಾರ್ಡ್ ವಿತರಣೆಗೆ ಕ್ರಮಕೈಗೊಳ್ಳಬೇಕು.

ಸೌಲಭ್ಯಗಳಿಗಾಗಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ವಿಲೇವಾರಿಗೆ ಆದ್ಯತೆ ನೀಡಬೇಕು. ಪಿಂಚಣಿ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ಪಿಂಚಣಿಗೆ ಅರ್ಜಿ ಸಲ್ಲಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆ ನಿವಾರಿಸಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕ ಮಂಡಳಿ ಮೂಲಕ ನಡೆಯುತ್ತಿದ್ದ ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರವನ್ನು ನಿಲ್ಲಿಸಬೇಕು. ಇದುವರೆಗೆ ನಡೆದಿರುವ ಖರೀದಿಗಳಲ್ಲಿನ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ, ಕಲ್ಲು ಒಡೆಯುವ ಕ್ವಾರಿ ಕಾರ್ಮಿಕ ಸಂಘದ ಪ್ರಮುಖರಾದ ಮಹೇಶ ಪತ್ತಾರ, ಎ.ಎಸ್.ಪೀರಜಾದೆ ಅವರೂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.