ಹುಬ್ಬಳ್ಳಿ: ನಗರದ ಹೊಸೂರು ಬಳಿ ಇರುವ ನೂತನ ಕೋರ್ಟ್ ಸಂಕೀರ್ಣದ ಸುತ್ತಮುತ್ತಲಿನ ರಸ್ತೆಗಳು ಹದಗೆಟ್ಟಿರುವುದನ್ನು ಖಂಡಿಸಿ, ಹುಬ್ಬಳ್ಳಿ ಯುವ ವಕೀಲರ ಸಂಘದ ಸದಸ್ಯರು ಸೋಮವಾರ ತಿಮ್ಮಸಾಗರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ಕೋರ್ಟ್‌ಗೆ ಸಂಪರ್ಕ ಕಲ್ಪಿಸುವ ಮಹಿಳಾ ವಿದ್ಯಾಪೀಠ ಸಿಗ್ನಲ್‌ನಿಂದ ತಿಮ್ಮಸಾಗರ ಚನ್ನಬಸವೇಶ್ವರದ ದೇವಸ್ಥಾನದ ರಸ್ತೆಯು ತೀರಾ ಹದಗೆಟ್ಟಿದೆ. ಇದರಿಂದಾಗಿ ವಾಹನಗಳ ಸವಾರರು ತೊಂದರೆ ಅನುಭವಿಸಬೇಕಿದೆ. ಹೆಚ್ಚಿನ ವಾಹನಗಳ ಓಡಾಟದಿಂದಾಗಿ ದೂಳು ಕೂಡ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆಗಳ ದುರುಸ್ತಿಗೆ ಕ್ರಮ ಕೈಗೊಳ್ಳುವಂತೆ, ಸಂಬಂಧಪಟ್ಟ ಇಲಾಖೆಗಳಿಗೆ ಲಿಖಿತವಾಗಿ ದೂರು ಕೊಟ್ಟರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹದಗೆಟ್ಟ ರಸ್ತೆಗಳ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯುವ ವಕೀಲರ ಸಂಘದ ಸಂಚಾಲಕ ಶಿವಾನಂದ ವಡ್ಡಟ್ಟಿ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.