ಕುಂದಗೋಳ: ‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಕ್ಷೇತ್ರ, ರಾಜ್ಯ ಹಾಗೂ ದೇಶ ಪ್ರಗತಿ ಕಾಣಲಿದೆ’ ಎಂದು ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಹೇಳಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳೆ, ವರೂರ ಸೇರಿದಂತೆ ಮುಂತಾದ ಗ್ರಾಮದಲ್ಲಿ ರೋಡ್ ಶೋ, ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿದರು.

‘ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಮಾಡಿದ್ದು, ಇನ್ನೂ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುವ ಗುರಿ ಹೊಂದಿದ್ದೇನೆ’ ಎಂದರು.

ಇದಕ್ಕೂ ಮುನ್ನ ಅಂಚಟಗೇರಿ ಗ್ರಾಮದ ರಮೇಶ, ಛಬ್ಬಿ ಗ್ರಾಮದ ಕರೆಪ್ಪ ಕೋಳಿ, ಬಸವರಾಜ ವಡ್ಡರ, ಹಿರೇಹರಕುಣಿ ಗ್ರಾಮದ ಪ್ರಕಾಶ ಜಿಗದೇವನವರ, ಕುಂದಗೋಳ ಪಟ್ಟಣ ಪಂಚಾಯಿತಿ ಸದಸ್ಯ ಮಲ್ಲಿಕ್ ಶಿರೂರ, ಮುಖಂಡರಾದ ಮಂಜು ಕಾಲವಾಡ ಸೇರಿದಂತೆ ಮುಂತಾದವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.

ಚನ್ನಮ್ಮ ಶಿವನಗೌಡರ, ಮಂಜುನಾಥ್ ದ್ಯಾವಕನವರ್, ಕುಮಾರಸ್ವಾಮಿ ಹಿರೇಮಠ, ಭಗವಂತ ವೆಂಕಣ್ಣವರ, ನೇಮಿಚಂದ್ರ ಬಸಾಪುರ, ಲಿಂಗರಾಜ ಮೆಣಸಿನಕಾಯಿ, ಉಮೇಶ್ ಕುಸುಗಲ್ ಪ್ರತಾಪ್ ಪಾಟೀಲ್ ಮಹೇಶಗೌಡ ಪಾಟೀಲ್ ಮುಂತಾದವರು ಇದ್ದರು.

ಕುಸುಮಾವತಿ ಪರ ಮಾಜಿ ಕ್ರಿಕೆಟಿಗ ಅಜರುದ್ದೀನ್ ಪ್ರಚಾರ

'ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಕುಸುಮಾವತಿ ಶಿವಳ್ಳಿ ಅವರಿಗೆ ಅಮೂಲ್ಯ ಮತ ನೀಡಬೇಕು’ ಎಂದು ಕಾಂಗ್ರೆಸ್ ಮುಖಂಡ ಎಂ.ಎಸ್. ಅಕ್ಕಿ ಹೇಳಿದರು.

ಮತಕ್ಷೇತ್ರದ ಚಿಕ್ಕಗುಂಜಳ ಹಿರೇಗುಂಜಳ ಬಾಗವಾಡ ಶೇರೆವಾಡ ಯಲಿವಾಳ ಛಬ್ಬಿ ಕಳಸ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಮತಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು. ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.