ಧಾರವಾಡ: ರೈತರ ಜಮೀನಿನ ಪಹಣಿಯಲ್ಲಿ ನಮೂದಿಸಿರುವ ವಕ್ಫ್ ಹೆಸರು ತೆಗೆದು ಹಾಕಬೇಕು ಎಂದು ಬಿಜೆಪಿ ಜಿಲ್ಲಾ ಘಟಕದವರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡು 'ನಮ್ಮ ಭೂಮಿ ನಮ್ಮ ಹಕ್ಕು ಘೋಷಣೆ'

ಕೂಗಿದರು.

ಕಾಂಗ್ರೆಸ್ ಪಕ್ಷವು ಓಲೈಕೆ ರಾಜಕಾರಣ ಮಾಡುತ್ತಿದೆ. ವಕ್ಫ್ ಹೆಸರಿನಲ್ಲಿ ರೈತರ ಜಮೀನು, ಮಠಮಾನ್ಯಗಳ ಜಾಗವನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಚಿವ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು, ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಸೀಮಾ ಮಸೂತಿ, ಶಂಕರ ಕುಮಾರ ದೇಸಾಯಿ, ಮಹೇಂದ್ರ ಕೌತಾಳ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.