ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಧಾರವಾಡ ವಲಯದ 19 ವರ್ಷದೊಳಗಿನವರ ತಂಡಕ್ಕೆ ಆಟಗಾರರ ಆಯ್ಕೆಯಲ್ಲಿ ತಾರತಮ್ಯ ಮಾಡಲಾಗಿದ್ದು, ಈ ಆಯ್ಕೆಯನ್ನು ರದ್ದುಪಡಿಸಬೇಕು’ ಎಂದು ಆಟಗಾರರ ಪೋಷಕರು, ತರಬೇತುದಾರರು ಆಗ್ರಹಿಸಿದ್ದಾರೆ.

19 ವರ್ಷದೊಳಗಿನವರ ಅಂತರ ವಲಯ ಕ್ರಿಕೆಟ್ ಟೂರ್ನಿ ಆಗಸ್ಟ್ 12ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಧಾರವಾಡ ವಲಯ ತಂಡಕ್ಕೆ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಆಗಸ್ಟ್ 6ರಂದು ನಡೆಸಲಾಗಿತ್ತು.

‘ಲೀಗ್ ಹಂತದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ 36 ಆಟಗಾರರನ್ನು ಆಯ್ಕೆ ಮಾಡಿ, ಅವರ ನಡುವೆ ಪಂದ್ಯಗಳನ್ನು ನಡೆಸಿ ಅದರಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ತಂಡಕ್ಕೆ ಆಯ್ಕೆ ಮಾಡಬೇಕು. ಆದರೆ, ಉತ್ತಮ ಪ್ರದರ್ಶನ ನೀಡದವರನ್ನು ಆಯ್ಕೆ ಮಾಡಲಾಗಿದೆ’ ಎಂದು ತರಬೇತುದಾರ ಜಯರಾಜ ನೂಲ್ವಿ ಆರೋಪಿಸಿದರು.

‘ಕಳೆದೆರಡು ವರ್ಷಗಳಿಂದ ಪ್ರತಿಭಾವಂತ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಗುತ್ತಿಲ್ಲ. ಇದರಿಂದ ಆಟಗಾರರಿಗೆ ಅನ್ಯಾಯವಾಗುತ್ತಿದೆ. 24 ವರ್ಷದೊಳಗಿನವರ ತಂಡದ ಆಯ್ಕೆಯೂ ಸರಿಯಾಗಿ ನಡೆಯುತ್ತಿಲ್ಲ’ ಎಂದರು.

‘ನನ್ನ ಪುತ್ರ ವಿರಾಜ್ ಚಾಂಪಿಯನ್ಸ್ ನೆಟ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾನೆ. ಲೀಗ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಆತನನ್ನು ಪರಿಗಣಿಸಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸದ ಆಟಗಾರರನ್ನು ಆಯ್ಕೆ ಮಾಡಲಾಗಿದೆ’ ಎಂದು ದೂರಿದರು.

‘ಈ ಅನ್ಯಾಯ ಸರಿಪಡಿಸಿ, ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಬೇಕು. ಇಲ್ಲದಿದ್ದರೆ ಇಲ್ಲಿನ ಕೆಎಸ್‌ಸಿಎ ಕ್ರೀಡಾಂಗಣದ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಆಟಗಾರರ ಆಯ್ಕೆಯಲ್ಲಿ ತಾರತಮ್ಯ ಮಾಡಿಲ್ಲ. ಆಟಗಾರರ ಪ್ರದರ್ಶನ ಆಧರಿಸಿ ಆಯ್ಕೆಗಾರರು ಪಾರದರ್ಶಕವಾಗಿ ಆಯ್ಕೆ ಮಾಡಿದ್ದಾರೆ. ಆರೋಪದಲ್ಲಿ ಹುರಳಿಲ್ಲ’ ಎಂದು ಕೆಎಸ್‌ಸಿಎ ಧಾರವಾಡ ವಲಯದ ನಿಮಂತ್ರಕ ನಿಖಿಲ್ ಭೂಸದ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.