ಹುಬ್ಬಳ್ಳಿ: ಇಲ್ಲಿನ ಶಿರಡಿನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ಬಿವಿಬಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ, ವಿಜಯಪುರ ಜಿಲ್ಲೆಯ ತಾಳಿಕೋಟೆಯ ರಾಕೇಶ ಶ್ರೀಶೈಲ ಜಂಬಲದಿನ್ನಿ (21) ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಕಾಲೇಜಿನಲ್ಲಿ ರಾಕೇಶ ಬಿಇ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್) ವಿದ್ಯಾರ್ಥಿ. ಜುಲೈ 8ರಂದು ಆರನೇ ಸೆಮಿಸ್ಟರ್ ಪರೀಕ್ಷೆ ಮುಗಿದಿವೆ. ವಿದ್ಯಾರ್ಥಿನಿಲಯದ ಕೊಠಡಿಯಲ್ಲಿ ಜೊತೆಗಿದ್ದ ಮೂವರು ವಿದ್ಯಾರ್ಥಿಗಳು ಊರಿಗೆ ಹೋಗಿದ್ದರು. ಹಲವು ಬಾರಿ ಕರೆ ಮಾಡಿದರೂ ರಾಕೇಶ ಸ್ವೀಕರಿಸಲಿಲ್ಲ. ಕೊಠಡಿಯ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ವಿಷಯ ಗೊತ್ತಾಯಿತು’ ಎಂದು ಹಾಸ್ಟೆಲ್ ವಿದ್ಯಾರ್ಥಿ ಸಚಿನ್ ಹೇಳಿದರು.

‘ರಾಕೇಶ ಮೊಬೈಲ್ ಆ್ಯಪ್‌ಗಳಲ್ಲಿ ಪಬ್ಜಿ, ಏವಿಯೇಟರ್ ಆನ್‌ಲೈನ್ ಆಟ ಆಡಿ, ಹಣ ಕಳೆದುಕೊಂಡಿದ್ದು ಆತನ ಸ್ನೇಹಿತರಿಂದ ಗೊತ್ತಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಯಿತು. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.