ಹುಬ್ಬಳ್ಳಿ: ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ, ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಸೋಮವಾರ ಭಂಡಿವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಭಂಡಿವಾಡ, ಶಿರಗುಪ್ಪಿ, ಹಳ್ಯಾಳ, ನಾಗರಹಳ್ಳಿ, ಮಂಟೂರು, ಇಂಗಳಹಳ್ಳಿ, ಕೋಳಿವಾಡ ಗ್ರಾಮದ ಮುನ್ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ, ಬೇಡಿಕೆಗಳ ಮನವಿಯನ್ನು ಹೆಚ್ಚುವರಿ ತಹಶೀಲ್ದಾರ್‌ಗೆ ಸಲ್ಲಿಸಿದರು.

ಅತಿವೃಷ್ಟಿಯಿಂದ ಹಾನಿಯಾದ ರೈತರ ಪ್ರತಿ ಹೆಕ್ಟೇರ್ ಹೊಲಕ್ಕೆ ₹50 ಸಾವಿರ ಪರಿಹಾರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಒದಗಿಸಬೇಕು. ರೈತರ ಟ್ರ್ಯಾಕ್ಟರ್‌ಗೆ ಡೀಸೆಲ್ ಅನ್ನು ರಿಯಾಯ್ತಿ ದರದಲ್ಲಿ ಒದಗಿಸಬೇಕು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕಿರಣ ರೆಡ್ಡರ, ಡಾ. ತಾಜುದ್ದೀನ್ ಮುಲ್ಲಾ, ರಘುನಾಥ ಕೆಂಪಲಿಂಗನಗೌಡ್ರ, ಉದಯ ದೊಡ್ಡಮನಿ, ಜಗದೀಶ ಗಾಣಗೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.