ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅತ್ಯಂತ ಸ್ವಾಗತಾರ್ಹವಾಗಿದೆ’ ಎಂದು ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಬಣ್ಣಿಸಿದ್ದಾರೆ.

‘ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,18,353 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳ ವಂತಿಕೆ ₹5 ಲಕ್ಷವನ್ನು ಬಡವರು ಸಂದಾಯ ಮಾಡಲು ಕಷ್ಟಪಡುತ್ತಿದ್ದು, ಈ ಹಿನ್ನೆಲೆಯಲ್ಲಿ ₹4 ಲಕ್ಷವನ್ನು ಸರ್ಕಾರವೇ ಭರಿಸಲು ತೀರ್ಮಾನ ಮಾಡಿದ್ದು, ಒಂದು ಲಕ್ಷವನ್ನು ಮಾತ್ರ ಫಲಾನುಭವಿ ಸಂದಾಯ ಮಾಡಬೇಕಾಗುತ್ತದೆ. ಇದರಿಂದ ಬಡವರಿಗೆ ತುಂಬಾ ಅನುಕೂಲವಾಗಲಿದೆ. ಮುಖ್ಯಮಂತ್ರಿ ಅವರಿಗೆ ಅಭಾರಿಯಾಗಿದ್ದೇನೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

‘ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಸುಮಾರು 1,18,353 ಮನೆಗಳ ನಿರ್ಮಾಣ ಪ್ರಗತಿಯಲ್ಲಿದ್ದು, ಅದರಲ್ಲಿ 48,796 ಮನೆಗಳನ್ನು ಶೀಘ್ರದಲ್ಲಿ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ನೇರ ವೇತನ ಪಡೆಯುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಕಾಯಂ ಮಾಡಲು ಘೋಷಣೆ ಮಾಡಿರುವುದು ಸ್ವಾಗತಾರ್ಹ. ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 2 ಸಾವಿರ ಕೋಟಿಯನ್ನು ಮೂಲಸೌಕರ್ಯ ಅಭಿವೃದ್ಧಿಗೆ ನೀಡುತ್ತಿರುವುದು, ಹುಬ್ಬಳ್ಳಿ– ಧಾರವಾಡ ಸಮೀಪ ಟೌನ್ಶಿಪ್ಗಳನ್ನು ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಧಾರವಾಡದಲ್ಲಿ ಆರೋಗ್ಯ ಇಲಾಖೆಯಿಂದ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ನಿರ್ಮಿಸಿ, ತೀವ್ರ ಅಸ್ವಸ್ಥ ರೋಗಿಗಳಿಗೆ ಗುಣಮುಖ ಆಗುವಂತೆ ಮಾಡಲು ಇದನ್ನು ಸ್ಥಾಪನೆ ಮಾಡಲಾಗುತ್ತಿದೆ. ಹುಬ್ಬಳ್ಳಿ ಎಪಿಎಂಸಿ ವ್ಯಾಪ್ತಿಯಲ್ಲಿ ಬಯೋ ಸಿಎನ್ಜಿ ಪ್ಲಾಂಟ್ ನಿರ್ಮಾಣ ಮಾಡಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.