ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಹಜ್ ಭವನನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ, ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ವತಿಯಿಂದ ಸಭೆ ನಡೆಸಲಾಯಿತು.

‘ಉತ್ತರ ಕರ್ನಾಟಕದಲ್ಲಿ ಹಜ್ ಭವನ ನಿರ್ಮಿಸುವುದಕ್ಕೆ ಸಂಸ್ಥೆಯಿಂದ ಸಮಿತಿ ರಚನೆ ಮಾಡಲಾಗಿದ್ದು, ಭಾನುವಾರ ಮೊದಲ ಸಭೆ ನಡೆಸಲಾಯಿತು. ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗದ ಲಭ್ಯತೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ ಸೇರಿದಂತೆ ವಿವಿಧ ನಾಯಕರೊಂದಿಗೆ ಚರ್ಚಿಸಲಾಗುವುದು. ಜಾಗ ನೀಡುವಂತೆ ಮನವಿ ಮಾಡಲಾಗುವುದು’ ಎಂದು ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ ‘ಪ್ರಜಾವಾಣಿ’ಗೆ ತಿಳಿಸಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಯುಸೂಫ ಸವಣೂರ, ಉಪಾಧ್ಯಕ್ಷ ಅಲ್ತಾಫ ಕಿತ್ತೂರ, ಮುಖಂಡರಾದ ಎಂ.ಎ. ಪಠಾಣ, ಬಶೀರ್ ಹಳ್ಳೂರ, ಅಬ್ದುಲ್ಲಾ ಮುನಾಫ ದೇವಗೇರಿ, ದಾದಾಯತ್ ಖೈರಾತಿ, ಅಬ್ದುಲ್ ಅಹ್ಮದ್ ಖೈರಾತಿ, ಅನೀಲಕುಮಾರ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.