ಧಾರವಾಡ: ‘ಒತ್ತಡದ ಬದುಕಿನಿಂದ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಕ್ಷಮತಾ ಸಂಸ್ಥೆ, ಐಎಂಎ, ಡಾ.ಜಂಬಗಿ, ಡಾ. ರಾಮನಗೌಡರ ಆಸ್ಪತ್ರೆಗಳ ಸಹಯೋಗದಲ್ಲಿ ಕರಡಿಗುಡ್ಡ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಆರೋಗ್ಯ ಮುಖ್ಯ. ಪ್ರಧಾನಿ ಮೋದಿ ಅವರು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ ದೇಶದಲ್ಲಿ ಪ್ರತಿವರ್ಷ 54 ಸಾವಿರ ವೈದ್ಯರು ತಯಾರಾಗುತ್ತಿದ್ದರು. ಈಗ ಆ ಸಂಖ್ಯೆ ಒಂದು ಲಕ್ಷಕ್ಕೆ ತಲುಪಿದೆ. ಜನರಿಗೆ ಆಯುಷ್ಮಾನ್ ಕಾರ್ಡ್ ಸೌಲಭ್ಯ ಒದಗಿಸಲಾಗಿದ್ದು, ₹5 ಲಕ್ಷದವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ’ ಎಂದರು.

‘ಧಾರವಾಡದ ಸಿವಿಲ್ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳಿಗಾಗಿ ವಿಶೇಷ ಘಟಕ, ತಾಯಿ ಮತ್ತು ಮಗುವಿಗೆ ಪ್ರತ್ಯೇಕ ಘಟಕ, ಹುಬ್ಬಳ್ಳಿಯಲ್ಲಿ ಜಯದೇವ, ಕಿಮ್ಸ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ’ ಎಂದರು.

ಶಿಬಿರದಲ್ಲಿ ನರ, ಎಲುಬು, ಕೀಲುಗಳು, ಕಿವಿ, ಹೃದಯ ಸಂಬಂಧಿ ಹಾಗೂ ಇತರ ಕಾಯಿಲೆಗಳ ತಪಾಸಣೆ ನಡೆಯಿತು.

ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.