ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟಪ್ರಕರಣ ವಾಣಿಜ್ಯ ನಗರದಲ್ಲಿ ಸ್ಲೀಪರ್ ಸೆಲ್ ಇವೆ ಎನ್ನುವುದಕ್ಕೆ ಸಾಕ್ಷಿ ಒದಗಿಸಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಈ ಹಿಂದಿನಿಂದಲೂ ಭಯೋತ್ಪಾದಕರ ಅಡುಗುತಾಣ,ಅವರ ಕಾರ್ಯಚಟುವಟಿಕೆಗಳಿಗೆ ನೆಲೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಇದನ್ನೂ ಓದಿ:ಹುಬ್ಬಳ್ಳಿ ರೈಲ್ವೆನಿಲ್ದಾಣದಲ್ಲಿ ಬಾಂಬ್ ಸ್ಫೋಟ: ಒಬ್ಬರಿಗೆ ಗಾಯ

ಉತ್ತರ ಪ್ರದೇಶದ ತಿವಾರಿ ಹತ್ಯೆ ಪ್ರಕರಣ ಸಂಬಂಧ ಮಹ್ಮದ್ ಸಾದಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅವನನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಬೇಕು. ಅಲ್ಲದೇ, ಅವರ ಸಕ್ರಿಯ ಕಾರ್ಯಚಟುವಟಿಕೆಗಳ ಜಾಲವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.

ಸ್ಫೋಟ ತನಿಖೆ ಚುರುಕು: ಗೃಹ ಸಚಿವ ಬೊಮ್ಮಾಯಿ

ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸ್ಫೋಟಕದ ಮಾದರಿಯನ್ನು ಎಫ್ಎಸ್ಎಲ್ ಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕ ನಿಖರ ಮಾಹಿತಿ ತಿಳಿಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 'ಆಂಧ್ರಪ್ರದೇಶದಲ್ಲಿ ಇಂತಹ ಸ್ಫೋಟಕಗಳನ್ನು ಹೆಚ್ಚು ಬಳಕೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಪೊಲೀಸರ ಸಹಯೋಗದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಹುಬ್ಬಳ್ಳಿ ಸ್ಫೋಟ ಪ್ರಕರಣ: ಕಾರಣವಿನ್ನೂ ನಿಗೂಢ; ತನಿಖೆ ಚುರುಕು

ರೈಲಿನಲ್ಲಿ ಸ್ಪೋಟಕ ವಸ್ತುಗಳನ್ನು ಎಲ್ಲಿಂದ ತರಲಾಗಿದೆ, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎನ್ನುವ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಈಗಲೇ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಸ್ಲೀಪರ್ ಸೆಲ್ ಸಕ್ರಿಯವಾಗಿದ್ದಾರೆಯೇ ಎನ್ನುವ ಹಿನ್ನೆಲೆಯಲ್ಲಿಯೂ ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದ ಮಾಹಿತಿ ಮೇರೆಗೆ ಆಂತರಿಕ ಭದ್ರತಾ ವಿಭಾಗದವರು ಹುಬ್ಬಳ್ಳಿಯಲ್ಲಿ ಮೊಹಮದ್ ಸಾದಿಕ್ ಎಂಬುವನನ್ನು ಬಂಧಿಸಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದೆ ಎಂದರು.

ಇದನ್ನೂ ಓದಿ:ಹುಬ್ಬಳ್ಳಿ ಸ್ಫೋಟ: ಬಕೆಟ್ ಮೇಲಿತ್ತು ‘ನೋ ಬಿಜೆಪಿ, ನೋ ಆರ್ಎಸ್ಎಸ್’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.