ಹುಬ್ಬಳ್ಳಿ: ಇಲ್ಲಿನ ಹಳೇ ಕೋರ್ಟ್ ವೃತ್ತದ ಬಳಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ವೇಳೆ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದು ಗಂಭೀರ ಗಾಯಗೊಂಡು, ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಬಿರಾಜ ದಯಣ್ಣವರ (59) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಸತ್ತೂರಿನ ರಾಜಾಜಿನಗರ ನಿವಾಸಿಯಾದ ಎಎಸ್‌ಐ ನಾಬಿರಾಜ ಅವರು ಸೆ.10ರಂದು ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ತಲೆಯ ಮೇಲೆ ಕಬ್ಬಿಣದ ರಾಡ್ ಬಿದ್ದಿತ್ತು.

ಮೆದುಳಿಗೆ ತೀವ್ರ ಪೆಟ್ಟುಬಿದ್ದ ಪರಿಣಾಮ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರನ್ನು ಐಸಿಯುನಲ್ಲಿ ಇಟ್ಟು, ಆರೋಗ್ಯದ ಮೇಲೆ ನಿಗಾ ಇಡಲು ಐದು ವೈದ್ಯರ ವಿಶೇಷ ತಂಡವನ್ನು ಸಹ ರಚಿಸಲಾಗಿತ್ತು.

ಅವಘಡಕ್ಕೆ ಸಂಬಂಧಿಸಿ ಮೇಲ್ಸೇತುವೆ ಗುತ್ತಿಗೆ ಪಡೆದ ಜಂಡು ಕಂಪನಿಯ ಮೂವರು ವ್ಯವಸ್ಥಾಪಕರು ಸೇರಿ 19 ಮಂದಿ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
.ಮೇಲ್ಸೇತುವೆ ಕಾಮಗಾರಿ ಅವಘಡ: 19 ಮಂದಿ ವಿರುದ್ಧ ಪ್ರಕರಣ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.