ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದ ಬಗ್ಗೆ ವಿನಾಕಾರಣ ಟೀಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಸಾಕ್ಷಿ ಬಹಿರಂಗಗೊಳಿಸಬೇಕು ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಪಕ್ಷದ ಕಚೇರಿಯಲ್ಲಿ ಗುರುವಾರ ಸಹಸ್ರಾರ್ಜುನ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂಡಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಹಾಗೂ ಪರಮೇಶ್ವರ ಬೇಜವಾಬ್ದಾರಿಯಿಂದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ಮಾತ್ರ ಆರೋಪ ಮಾಡುವುದು ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ’ ಎಂದರು.

‘ಸರಿಯಾದ ಸಾಕ್ಷಿಗಳಿಲ್ಲದೇ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರಿವರ ಹೆಸರು ಹೇಳುವುದು ಸರಿಯಲ್ಲ. ಎಲ್ಲ ವಿಷಯಗಳ ಬಗ್ಗೆಯೂ ಅನುಮಾನ ವ್ಯಕ್ತಪಡಿಸುವುದು ಕಾಂಗ್ರೆಸ್ ಕೆಲಸ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿದ್ದು ಏಕೆ ಎನ್ನುವುದನ್ನು ಅವರೇ ತಿಳಿಸಿದ್ದಾರೆ’ ಎಂದರು.

ಇದನ್ನೂ ಓದಿ... ಮೋದಿ ಭೇಟಿ ಮಾಡಿದ ಬೊಮ್ಮಾಯಿ: ಬಿಟ್ ಕಾಯಿನ್ ಆರೋಪ ನಿರ್ಲಕ್ಷಿಸಲು ಪ್ರಧಾನಿ ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.