ಕಲಘಟಗಿ: ತಾಲ್ಲೂಕಿನ ಬೆಂಡಲಗಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ದಾಳಿ ಮಾಡಿ ಆಕಳ ಕರುವನ್ನು ಎಳೆದೊಯ್ದು ತಿಂದು ಹಾಕಿದೆ.

ಕಲಘಟಗಿ ಪಟ್ಟಣದ ಸಮೀಪ ಇರುವ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹುಲಗಿನಕಟ್ಟಿ ಗ್ರಾಮದ ಶಾಂತವ್ವ ಹನುಮಂತಪ್ಪ ಭಜಂತ್ರಿ ಅವರಿಗೆ ಸೇರಿದ ಹೊಲದ ಗುಡಿಸಿಲಿನಲ್ಲಿ ಎರಡು ಆಕಳು ಇದ್ದವು, ಅದರಲ್ಲಿ ಆಕಳ ಕರುವನ್ನು ಚಿರತೆ ತಿಂದು ಹಾಕಿದೆ.

ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ದಾಳಿ ನಡೆಸಿರುವುದನ್ನು ಖಚಿತ ಪಡಿಸಿದರು.

ಚಿರತೆಯನ್ನು ಹಿಡಿದು ಬೇರೆ ಕಡೆ ಸಾಗಿಸಬೇಕು ಎಂದು ಗ್ರಾಮಸ್ಥರಾದ ಗಿರೀಶ ಭಜಂತ್ರಿ, ಪ್ರಭುಜನ ಹುಲಿಕಟ್ಟಿ, ನವೀನ ಹುಲಿಕಟ್ಟಿ, ಮನೋಜ ಹುಲಿಕಟ್ಟಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.

ಚಿರತೆ ಹಿಡಿಯುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮಾಡಿ ಬೇರೆ ಕಡೆ ಸ್ಥಳಾಂತರಿಸಲಾಗುವುದು ಹಾಗೂ ರೈತರಿಗೆ ಸರ್ಕಾರದಿಂದ ಪರಿಹಾರ ಧನ ನೀಡಲಾಗುವುದು ಎಂದು ತಾಲ್ಲೂಕು ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಪಾಟೀಲ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.