ಹುಬ್ಬಳ್ಳಿ: ಆಯಾ ಜಿಲ್ಲೆಯ ಸಚಿವರಿಗೇ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ. ಇದರಿಂದ ಆಡಳಿತ ಮತ್ತು ಅಭಿವೃದ್ಧಿ ಚುರುಕುಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ಜಗದೀಶ ಶೆಟ್ಟರ್ ಅಭಿಪ್ರಾಯ ಪಟ್ಟರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಸಲುವಾಗಿ ಮುಖ್ಯಮಂತ್ರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ, ಇದರಿಂದ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಇದು
ಮುಂಬರುವ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.

ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಸಿದ್ದರಾಮಯ್ಯ ಅವರು ಯಾವಾಗಲೂ ಹೇಳುತ್ತಲೇ ಇರುತ್ತಾರೆ. ಆದರೆ ಕಾಂಗ್ರೆಸ್ ಮುಖಂಡರು, ಶಾಸಕರು ಮತ್ತು ಮಾಜಿ ಶಾಸಕರು ನಮ್ಮ ಆಡಳಿತ ವ್ಯವಸ್ಥೆ ಮೆಚ್ಚಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರದಲ್ಲಿ ದೂಳಿಪಟವಾಗಿದೆ. ಆ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ. ಯಾರಾದರೂ ಕಾಂಗ್ರೆಸ್ ಗೆ ಸೇರಿದರೆ ಅವರಂಥ ಮುರ್ಖರು ಯಾರು ಇಲ್ಲ ಎಂದು ಹೇಳಿದರು.

ಬಿಜೆಪಿಯವರು ಕಾಂಗ್ರೆಸ್ ಸೇರುತ್ತಾರೆ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ಅವರು ಹೇಳುವಂತೆ ಕಾಂಗ್ರೆಸ್ ಯಾರೂ ಸೇರುತ್ತಿಲ್ಲ. ಸೇರುವುದೇ ನಿಜವಾದರೆ ಅವರ ಹೆಸರು ಬಹಿರಂಗಗೊಳಿಸಲಿ ಎಂದು ಸವಾಲು ಹಾಕಿದರು.

ಓದಿ... ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ: ಆನಂದ್ ಸಿಂಗ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.