ಹುಬ್ಬಳ್ಳಿ: ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ, ಸುಗಮ ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಅತಿಕ್ರಮಣ ತೆರವು, ಅನಧಿಕೃತ ಗೂಡಂಗಡಗಳ ತೆರವು, ಆಟೊ ರಿಕ್ಷಾಗಳಿಗೆ ಮೀಟರ್ ಅಳವಡಿಕೆ, ಸಂಚಾರ ನಿಯಮ ಕಡ್ಡಾಯ ಪಾಲನೆ, ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ಅಳವಡಿಕೆಗೆ ಪೊಲೀಸ್ ಕಮಿಷನರ್ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ(ಕೆಸಿಸಿಐ) ಮನವಿ ಮಾಡಿದೆ.

ಹುಬ್ಬಳ್ಳಿ–ಧಾರವಾಡ ಹಲವು ಅಭಿವೃದ್ಧಿ ಕಾರ್ಯಗಳಿಂದಾಗಿ ಸ್ಮಾರ್ಟ್ಸಿಟಿಯಾಗಿ ನಿರ್ಮಾಣವಾಗುತ್ತಿದ್ದು, ಇದರ ಜೊತೆಗೆ ‘ಸ್ಮಾರ್ಟ್ ಪೊಲೀಸ್’ ವ್ಯವಸ್ಥೆ ರೂಪುಗೊಳ್ಳಬೇಕಾಗಿದೆ ಎಂದು ಸಂಸ್ಥೆಯ ಪದಾಧಿಕಾರಿಗಳು ಗುರುವಾರ ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ ಅವರಿಗೆ ಮನವಿ ಮಾಡಿದರು.

ಅವಳಿ ನಗರಗಳ ಅಭಿವೃದ್ಧಿ ವಿಷಯದಲ್ಲಿ ಪೊಲೀಸ್ ಇಲಾಖೆಯು ಕಾನೂನಾತ್ಮಕವಾಗಿ ಕಠಿಣ ನಿರ್ಧಾರ ತೆಗೆದುಕೊಂಡು, ಜನತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದೆ.

ಆಗಾಗ ಜನಸಂಪರ್ಕ ಸಭೆ ಆಯೋಜಿಸಬೇಕು. ನಗರ ಬೆಳೆದಂತೆ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ವೃದ್ಧಿಯಾಗುತ್ತಾ ಹೋಗುತ್ತಿರುವುದರಿಂದ ಪೊಲೀಸ್ ಇಲಾಖೆಯು ಇತರೆ ಇಲಾಖೆ ಹಾಗೂ ಪರಿಣಿತರೊಂದಿಗೆ ಮುಂಚಿತವಾಗಿಯೇ ವಿಸ್ತೃತವಾದ ಕಾರ್ಯಯೋಜನೆ ಹಾಕಿಕೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳಾದ ವಿನಯ ಜೆ. ಜವಳಿ, ಮಹೇಂದ್ರ ಲದ್ದಡ, ಅಶೋಕ ತೋಳನವರ, ಜಿ.ಕೆ ಆದಪ್ಪಗೌಡರ, ಅಶೋಕ ಗಡಾದ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.