ಹುಬ್ಬಳ್ಳಿ: ಪದೋನ್ನತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೋಟಕ್ ಮಹೀಂದ್ರ ಬ್ಯಾಂಕ್ ಉದ್ಯೋಗಿಗಳ ಸಂಘದ ಸದಸ್ಯರು ನಗರದ ಕೊಪ್ಪಿಕಾರ್ ರಸ್ತೆಯಲ್ಲಿರುವ ಬ್ಯಾಂಕ್ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಐಎನ್‌ಜಿ ವೈಶ್ಯ ಬ್ಯಾಂಕ್‌ನೊಂದಿಗೆ ಕೋಟಕ್ ಮಹೀಂದ್ರ ಬ್ಯಾಂಕ್ ವಿಲೀನಗೊಳಿಸುವಾಗ ಉದ್ಯೋಗಿಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಲಾಗುತ್ತಿದೆ. ನೌಕರರ ಯಾವುದೇ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದಾಗಿ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸಂಘದ ಉಪ ಪ್ರಧಾನ ಕಾರ್ಯದರ್ಶಿ ವಿ. ನಾಗರಾಜ ಮಾತನಾಡಿ, ವರ್ಗಾವಣೆ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗುತ್ತಿದೆ. ಒಂದು ಸ್ಥಳದಲ್ಲಿ ನಿರ್ದಿಷ್ಟ ವರ್ಷಗಳ ಕಾಲ ಕೆಲಸ ಮಾಡಿದ ನಂತರ, ಮೂರು ಆಯ್ಕೆಗಳನ್ನು ನೀಡಿ ವರ್ಗಾವಣೆ ಮಾಡಬೇಕಾಗುತ್ತದೆ. ಆದರೆ ಇದನ್ನು ಪಾಲಿಸುತ್ತಿಲ್ಲ. ಬ್ಯಾಂಕ್‌ನಲ್ಲಿ ಈಗ ಕಾಯಂ ನೌಕರರು ಹಾಗೂ ಗುತ್ತಿಗೆ ನೌಕರರು ಇಬ್ಬರೂ ಇದ್ದಾರೆ, ಕಾಯಂ ನೌಕರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಹತೆ ಇರುವ ಸಿಬ್ಬಂದಿಗೆ ಪದನೋನ್ನತಿ ನೀಡುತ್ತಿಲ್ಲ. ಉಪ ಸಿಬ್ಬಂದಿಗೆ ಕ್ಲರಿಕಲ್ ಹುದ್ದೆಗಳಿಗೆ ಪರಿಗಣಿಸುತ್ತಿಲ್ಲ. ಹಿರಿಯ ಅಧಿಕಾರಿಗಳು ಮಾಡಲು ಅಸಾಧ್ಯವಾದಂತಹ ಟಾರ್ಗೆಟ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ಬೆದರಿಕೆ ಭಾಷೆ ಉಪಯೋಗಿಸುತ್ತಿದ್ದಾರೆ ಎಂದು ದೂರಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಸ್ಟೀಫನ್ ಚಂದ್ರ, ಜಂಟಿ ಕಾರ್ಯದರ್ಶಿ ದಯಾನಂದ ಅಂಬರ್‌ಕರ್, ಕೇಂದ್ರ ಸಮಿತಿ ಸದಸ್ಯ ಆನಂದ ಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.